ನವದೆಹಲಿ: ಕಳೆದ 10 ವರ್ಷಗಳಲ್ಲಿ ಎಎಪಿ ಸರ್ಕಾರ ದೆಹಲಿ ಜನರಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದೆ. ದೇಶದಲ್ಲಿ ಇತರೆ ರಾಜ್ಯಗಳು ಮಾಡದ ಬಹಳಷ್ಟು ಕೆಲಸಗಳನ್ನು ಪಕ್ಷ ಮಾಡಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
0
samarasasudhi
ಅಕ್ಟೋಬರ್ 28, 2024
ನವದೆಹಲಿ: ಕಳೆದ 10 ವರ್ಷಗಳಲ್ಲಿ ಎಎಪಿ ಸರ್ಕಾರ ದೆಹಲಿ ಜನರಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದೆ. ದೇಶದಲ್ಲಿ ಇತರೆ ರಾಜ್ಯಗಳು ಮಾಡದ ಬಹಳಷ್ಟು ಕೆಲಸಗಳನ್ನು ಪಕ್ಷ ಮಾಡಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಗೆ ಮುನ್ನ 'ಪಾದಯಾತ್ರೆ' ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕದಂತೆ ಜನರಲ್ಲಿ ಮನವಿ ಮಾಡಿದರು.
ಎಎಪಿಗೆ ಮತ ಹಾಕುವಂತೆ ಹಾಗೂ ಮತ್ತೆ ಮುಖ್ಯಮಂತ್ರಿಯಾಗಲು ಸಹಾಯ ಮಾಡುವಂತೆ ಜನರಲ್ಲಿ ವಿನಂತಿಸಿದರು. ಹೆಚ್ಚುವರಿ ನೀರಿನ ಬಿಲ್ ಮನ್ನಾ ಮಾಡುವುದಾಗಿ ಕೇಜ್ರಿವಾಲ್ ಭರವಸೆ ನೀಡಿದರು.
ಮುಂದಿನ ವರ್ಷದ ಫೆಬ್ರುವರಿಯಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್‌ನಲ್ಲಿ ಬಿಲ್ ಮನ್ನಾ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ
ಮುಖ್ಯಮಂತ್ರಿ ಆತಿಶಿ, ಮನೀಷ್ ಸಿಸೋಡಿಯಾ, ಸಂಜಯ್ ಸಿಂಗ್ ಸೇರಿದಂತೆ ಇತರ ಎಎಪಿ ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.