ಗುಮ್ಲಾ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಗೆ ಸೇರಿದ ಐವರು ಮಾವೋವಾದಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
0
samarasasudhi
ಅಕ್ಟೋಬರ್ 04, 2024
ಗುಮ್ಲಾ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಗೆ ಸೇರಿದ ಐವರು ಮಾವೋವಾದಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಮಾವೋವಾದಿಗಳಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬುಧವಾರ ಜಿಲ್ಲೆಯ ಅಂಜನ್ ಹಿರಣ್ಯಖಂಡ ಅರಣ್ಯ ಪ್ರದೇಶದಲ್ಲಿ ಉಪ-ವಲಯ ಕಮಾಂಡರ್‌ನನ್ನು ಬಂಧಿಸಲಾಗಿತ್ತು. ಆತನ ತಲೆಗೆ ₹5 ಲಕ್ಷ ಇನಾಮು ಘೋಷಿಸಲಾಗಿತ್ತು.
ಬಳಿಕ ಆತನನ್ನು ವಿಚಾರಣೆಗೊಳಪಡಿಸಿದಾಗ ಲಭಿಸಿದ ಮಾಹಿತಿಯಂತೆ ಇತರೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಡಿಐಜಿ (ಸೌತ್ ಚೋಟಾನಾಗ್ಪುರ ವಲಯ) ಅನೂಪ್ ಬಿರ್ತಾರೆ ತಿಳಿಸಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಅನೇಕ ಮಾವೋದಿಗಳ ಹತ್ಯೆ ಹಾಗೂ ಬಂಧನವಾಗಿದೆ ಎಂದು ಅವರು ತಿಳಿಸಿದ್ದಾರೆ.