ಚಂಡೀಗಢ: ಅಕ್ಟೋಬರ್ 17ರಂದು ಬಿಜೆಪಿ ನೇತೃತ್ವದ ಹರಿಯಾಣ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
0
samarasasudhi
ಅಕ್ಟೋಬರ್ 12, 2024
ಚಂಡೀಗಢ: ಅಕ್ಟೋಬರ್ 17ರಂದು ಬಿಜೆಪಿ ನೇತೃತ್ವದ ಹರಿಯಾಣ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಆಡಳಿತ ನಡೆಸುತ್ತಿರುವ ಕೆಲವು ರಾಜ್ಯಗಳ ಸಿಎಂಗಳು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ.
ಬಿಜೆಪಿಯ ನೇತೃತ್ವದಲ್ಲಿ ಸತತ ಮೂರನೇ ಬಾರಿ ರಚನೆಯಾಗಲಿರುವ ಸರ್ಕಾರದಲ್ಲಿ ನಾಯಬ್ ಸಿಂಗ್ ಸೈನಿ ಅವರೇ ಮುಖ್ಯಮಂತ್ರಿ ಆಗುವ ಸಾಧ್ಯತೆ ಇದೆ.
ಪಂಚಕುಲ ಸೆಕ್ಟೆರ್ 5ರ ದಸರಾ ಮೈದಾನದಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ.
90 ಸದಸ್ಯ ಬಲದ ಹರಿಯಾಣದಲ್ಲಿ ಸರಳ ಬಹುಮತ ಗಳಿಸಿರುವ ಬಿಜೆಪಿ 'ಹ್ಯಾಟ್ರಿಕ್' ಸಾಧನೆ ಮಾಡಿದೆ. ಬಿಜೆಪಿ 48 ಹಾಗೂ ಕಾಂಗ್ರೆಸ್ 37 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಅಕ್ಟೋಬರ್ 8ರಂದು ಫಲಿತಾಂಶ ಪ್ರಕಟಗೊಂಡಿತ್ತು.