ನವದೆಹಲಿ: ಒಂದು ಕೈಯಲ್ಲಿ ತಕ್ಕಡಿ, ಮತ್ತೊಂದು ಕೈಯಲ್ಲಿ ಸಂವಿಧಾನದ ಪ್ರತಿ ಹಿಡಿದಿರುವ ನ್ಯಾಯದೇವತೆಯ ಕಣ್ಣಿಗೆ ಕಟ್ಟಿರುವ ಪಟ್ಟಿಯನ್ನು ತೆಗೆಯಲಾಗಿದೆ....
0
samarasasudhi
ಅಕ್ಟೋಬರ್ 17, 2024
ನವದೆಹಲಿ: ಒಂದು ಕೈಯಲ್ಲಿ ತಕ್ಕಡಿ, ಮತ್ತೊಂದು ಕೈಯಲ್ಲಿ ಸಂವಿಧಾನದ ಪ್ರತಿ ಹಿಡಿದಿರುವ ನ್ಯಾಯದೇವತೆಯ ಕಣ್ಣಿಗೆ ಕಟ್ಟಿರುವ ಪಟ್ಟಿಯನ್ನು ತೆಗೆಯಲಾಗಿದೆ....
ನ್ಯಾಯದೇವತೆಯ ಹೊಸ ಪ್ರತಿಮೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದ್ದು, ಖಡ್ಗ ಹಿಡಿದಿರುವ ಕೈಯಲ್ಲಿ ಸಂವಿಧಾನ ಪ್ರತಿಯಿದೆ. ಕಣ್ಣಿಗೆ ಕಟ್ಟಿರುವ ಪಟ್ಟಿಯನ್ನು ತೆಗೆಯಲಾಗಿದೆ ಎಂದು ಆಲ್ ಇಂಡಿಯಾ ರೇಡಿಯೊ ವರದಿ ಮಾಡಿದೆ.
ವಸಾಹತುಶಾಹಿ ಪರಂಪರೆಯನ್ನು ಕೈಬಿಟ್ಟು ಭಾರತ ಮುಂದುವರಿಯಬೇಕಾಗಿದೆ. ನ್ಯಾಯದೇವತೆ ಕುರುಡಲ್ಲ, ಅವಳು ಎಲ್ಲರನ್ನು ಸಮಾನವಾಗಿ ನೋಡುತ್ತಾಳೆ ಎಂಬ ಸಂದೇಶವನ್ನು ರವಾನಿಸಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಈ ಬದಲಾವಣೆಗೆ ಸೂಚಿಸಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ
ಈ ಹಿಂದೆ ಇದ್ದ ನ್ಯಾಯದೇವತೆಯ ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಲಾಗಿತ್ತು. ಸಂಪತ್ತು, ಅಧಿಕಾರ, ಸ್ಥಾನಮಾನವನ್ನು ಪರಿಗಣಿಸದೇ ಎಲ್ಲರಿಗೂ ಸಮಾನ ನ್ಯಾಯವನ್ನು ದೊರಕಬೇಕು ಎಂಬ ಆಶಯವನ್ನು ಇದು ಸೂಚಿಸುತ್ತಿತ್ತು. ಅಲ್ಲದೇ ಒಂದು ಕೈಯಲ್ಲಿ ತಕ್ಕಡಿ ಹಿಡಿದರೆ ಮತ್ತೊಂದು ಕೈಯಲ್ಲಿ ಖಡ್ಗವಿತ್ತು.