HEALTH TIPS

ಕಾರ್ಖಾನೆಯಲ್ಲಿ ಸ್ಫೋಟ; ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯ

 ಕೊಚ್ಚಿ: ಕೇರಳದ ಎರ್ನಾಕುಲಂ ಜಿಲ್ಲೆಯ ಪ್ರಾಣಿಗಳ ಕೊಬ್ಬು ಸಂಸ್ಕರಣಾ‍ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಮೂವರಿಗೆ ಗಾಯಗಳಾಗಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮೃತರನ್ನು ಒಡಿಶಾ ಮೂಲದ ಅಜಯ್‌ ಎಂದು ಗುರುತಿಸಲಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಗ್ಯಾಸ್‌ ಸಿಲಿಂಡರ್‌ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಆದರೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries