ಶಿಮ್ಲಾ: ಹಿಮಾಚಲ ಪ್ರದೇಶದ ನಿಗುಲ್ಸಾರಿಯಲ್ಲಿ ಇಂದು (ಮಂಗಳವಾರ) ಮುಂಜಾನೆ ಭಾರಿ ಭೂಕುಸಿತ ಸಂಭವಿಸಿ ಕಿನ್ನೌರ್ ಜಿಲ್ಲೆ ಮತ್ತು ಶಿಮ್ಲಾ ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
0
samarasasudhi
ಅಕ್ಟೋಬರ್ 02, 2024
ಶಿಮ್ಲಾ: ಹಿಮಾಚಲ ಪ್ರದೇಶದ ನಿಗುಲ್ಸಾರಿಯಲ್ಲಿ ಇಂದು (ಮಂಗಳವಾರ) ಮುಂಜಾನೆ ಭಾರಿ ಭೂಕುಸಿತ ಸಂಭವಿಸಿ ಕಿನ್ನೌರ್ ಜಿಲ್ಲೆ ಮತ್ತು ಶಿಮ್ಲಾ ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಭೂಕುಸಿತದಿಂದ ಯಾರಿಗೂ ಗಾಯಗಳಾಗಿಲ್ಲ. ಆದರೆ, ಹೆಚ್ಚಿನ ಸಂಖ್ಯೆಯ ಪ್ರವಾಸಿಗರ ವಾಹನಗಳು ಮತ್ತು ಸೇಬು ತುಂಬಿದ ಟ್ರಕ್‌ಗಳು ಹೆದ್ದಾರಿಯ ಎರಡು ಬದಿಗಳಲ್ಲಿ ಸಿಲುಕಿಕೊಂಡಿವೆ.
'ಹಿಮಾಚಲ ಪ್ರದೇಶದಲ್ಲಿ ಜೂನ್ 27ರಂದು ಮಾನ್ಸೂನ್ ಪ್ರಾರಂಭವಾದಾಗಿನಿಂದ ಈವರೆಗೆ ಮಳೆ ಸಂಬಂಧಿತ ಅವಘಡಗಳಲ್ಲಿ ಸುಮಾರು 186 ಜನರು ಮೃತಪಟ್ಟಿದ್ದಾರೆ. 28 ಮಂದಿ ಕಾಣೆಯಾಗಿದ್ದಾರೆ. ಮಳೆಯಿಂದಾಗಿ ರಾಜ್ಯದಲ್ಲಿ ₹1,360 ಕೋಟಿ ಆಸ್ತಿ-ಪಾಸ್ತಿ ನಷ್ಟವಾಗಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.