ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
0
samarasasudhi
ಅಕ್ಟೋಬರ್ 16, 2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್‌ನಲ್ಲಿ (SKICC) ನಡೆದ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಅಬ್ದುಲ್ಲಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆದ ಮೂರು ದಿನಗಳ ಬಳಿಕ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಒಮರ್ ಅವರೊಂದಿಗೆ ಸಕೀನಾ ಮಸೂದ್, ಜಾವೇದ್ ದಾರ್, ಜಾವೇದ್ ರಾಣಾ, ಸುರೀಂದರ್ ಚೌಧರಿ ಮತ್ತು ಸತೀಶ್ ಶರ್ಮಾ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇತ್ತೀಚೆಗೆ ನಡೆದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್(ಎನ್‌ಸಿ)-ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ ಬಾರಿಸಿತ್ತು.
ಪ್ರಮಾಣವಚನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಮೈತ್ರಿಕೂಟದ ನಾಯಕರು ಹಾಜರಿದ್ದರು.
ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು 2019ರ ಅಕ್ಟೋಬರ್ 31 ರಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿದೆ.