HEALTH TIPS

ತೆಲಂಗಾಣ: ಚಾಕುವಿನಿಂದ ಇರಿದು ಕಾಂಗ್ರೆಸ್ ನಾಯಕನ ಹತ್ಯೆ

 ರೀಂನಗರ : ಆಡಳಿತಾರೂಢ ಕಾಂಗ್ರೆಸ್ ನಾಯಕನನ್ನು ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ತೆಲಂಗಾಣದ ಜಗ್ತಿಯಾಲ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಗಾರೆಡ್ಡಿ (56) ಮೃತ ಕಾಂಗ್ರೆಸ್‌ ನಾಯಕ.

ಜಗ್ತಿಯಾಲ ಜಿಲ್ಲೆಯ ಜಬಿತಾಪುರ ಗ್ರಾಮದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಇವರಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಗಂಗಾರೆಡ್ಡಿ ಅವರನ್ನು ಕಾರಿನಿಂದ ಇಳಿದ ವ್ಯಕ್ತಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ಪೊಲಿಸರು ಹೇಳಿದ್ದಾರೆ.

ಸದ್ಯ ಮೃತದೇಹವನ್ನು ಜಗ್ತಿಯಾಲದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇವರು ಎಂಎಲ್‌ಸಿ ಜೀವನ್ ರೆಡ್ಡಿ ಅವರ ಆಪ್ತರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಹಳೆಯ ವೈಷಮ್ಯದಿಂದ ಕೊಲೆ ನಡೆದಿರಬಹುದು. ಆರೋಪಿ ತಲೆಮರೆಸಿಕೊಂಡಿದ್ದು, ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries