HEALTH TIPS

ಕೊಂಡೆವೂರು ಮಠದಲ್ಲಿ ಶ್ರೀ ಶಾರದ ಪ್ರತಿಷ್ಠೆ-ಸರಸ್ವತೀ ಹವನ

ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವ ಪ್ರಯುಕ್ತ ಬುಧವಾರ ಬೆಳಿಗ್ಗೆ 7.30 ಕ್ಕೆ ಶ್ರೀ ಶಾರದ ಪ್ರತಿಷ್ಠೆ ಮತ್ತು  ವಿದ್ಯಾರ್ಥಿಗಳ ಜ್ಞಾನ ಶಕ್ತಿ ಹೆಚ್ಚಿಸುವ ಸಲುವಾಗಿ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ, ವೇದಮೂರ್ತಿ ಹರಿನಾರಾಯಣ ಮಯ್ಯರ ಪೌರೋಹಿತ್ಯದಲ್ಲಿ "ಸರಸ್ವತೀ ಹವನ" ನಡೆಯಿತು. ಈ ಸಂದರ್ಭದಲ್ಲಿ  ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠದ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.


ನಾಳೆ(ಅ..11) ದುರ್ಗಾಷ್ಟಮಿ ಪ್ರಯುಕ್ತ ವಿದುಷಿ ಉಷಾ ಈಶ್ವರ್ ಭಟ್ ಕಾಸರಗೋಡು ಮತ್ತು ಬಳಗದವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ. ಅ.12 ರಂದು  ವಿಜಯದಶಮಿಯ ಶುಭದಿನದಂದು ಬೆ.7.30 ಕ್ಕೆ ವಿದ್ಯಾರಂಭ, ಬೆ.8.00 ಕ್ಕೆ ವಾಹನಪೂಜೆ ಬಳಿಕ  ಕು.ಗಾಯತ್ರಿ ಮತ್ತು ಕು. ಶ್ರಾವಣ್ಯ ಕೊಂಡೆವೂರು ಇವರ “ಶಾಸ್ತ್ರೀಯ ಸಂಗೀತ ಕಾರ್ಯಕ್ರಮ”, ಮಧ್ಯಾಹ್ನ ಪೂಜೆಯ ನಂತರ ಶ್ರೀ ಮಠದ ನಕ್ಷತ್ರವನದಲ್ಲಿರುವ ಆನಂದತೀರ್ಥ ಪುಷ್ಕರಿಣಿಯಲ್ಲಿ ಶ್ರೀ ಶಾರದಾ ವಿಸರ್ಜನೆ ನಡೆಯಲಿರುವುದು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries