ನವದೆಹಲಿ: ಪೆರೋಲ್ ಮೇಲೆ ಜೈಲಿನಿಂದ ಹೊರಬಂದಿದ್ದ ಸರಣಿ ಅತ್ಯಾಚಾರ ಪ್ರಕರಣದ ಅಪರಾಧಿಯು ತನ್ನ ಮಗಳು ಹಾಗೂ ಸೋದರ ಸೊಸೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸಗಢದ ಕೊರಿಯ ಜಿಲ್ಲೆಯಲ್ಲಿ ನಡೆದಿದೆ.
0
samarasasudhi
ಅಕ್ಟೋಬರ್ 30, 2024
ನವದೆಹಲಿ: ಪೆರೋಲ್ ಮೇಲೆ ಜೈಲಿನಿಂದ ಹೊರಬಂದಿದ್ದ ಸರಣಿ ಅತ್ಯಾಚಾರ ಪ್ರಕರಣದ ಅಪರಾಧಿಯು ತನ್ನ ಮಗಳು ಹಾಗೂ ಸೋದರ ಸೊಸೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸಗಢದ ಕೊರಿಯ ಜಿಲ್ಲೆಯಲ್ಲಿ ನಡೆದಿದೆ.
ಅತ್ಯಾಚಾರ ಎಸಗಿರುವ ಸಂಬಂಧ ಈಗಾಗಲೇ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಅಪರಾಧಿಯು ಪೆರೋಲ್ ಮೇಲೆ ಹೊರಗೆ ಬಂದಿದ್ದನು.
ಅಕ್ಟೋಬರ್ 19ರಂದು ತಂದೆ ನನ್ನ ಮೇಲೆ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ಯಾರಿಗೂ ತಿಳಿಸದಂತೆ ಬೆದರಿಕೆಯನ್ನೂ ಹಾಕಿದ್ದರು ಎಂದು ಮಗಳು (ಸಂತ್ರಸ್ತೆ) ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಅಕ್ಟೋಬರ್ 21ರಂದು ಕಟ್ಟಿಗೆ ತರಲು ತೆರಳಿದ್ದ ವೇಳೆ ನನ್ನ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿರುವುದಾಗಿ ಸೋದರ ಸೊಸೆ (ಸಂತ್ರಸ್ತೆ) ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಪರಾಧಿಯು ತಪ್ಪಿಸಿಕೊಂಡಿದ್ದು, ಮೊಬೈಲ್ ಬಳಸದ ಕಾರಣ ಆತನ ಚಲನವಲನಗಳ ಮೇಲೆ ನಿಗಾ ಇಡಲು ಸಾಧ್ಯವಾಗುತ್ತಿಲ್ಲ. ಆದರೆ ಶೀಘ್ರವೇ ಅಪರಾಧಿಯನ್ನು ಪತ್ತೆ ಹಚ್ಚಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ