ಮಥುರಾ : ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಇಬ್ಬರು ಸಹೋದರರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶ | ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಸಹೋದರರು ಆತ್ಮಹತ್ಯೆ
0
ಅಕ್ಟೋಬರ್ 20, 2024
Tags
0
samarasasudhi
ಅಕ್ಟೋಬರ್ 20, 2024
ಮಥುರಾ : ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಇಬ್ಬರು ಸಹೋದರರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಗೋವಿಂದ್ ಧಾಮ್ ಕಾಲೋನಿ ನಿವಾಸಿಗಳಾದ ಮಹೇಶ್ ಅಗರ್ವಾಲ್ (38) ಮತ್ತು ಸೌರಭ್ ಅಗರ್ವಾಲ್ (32) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ದೆಹಲಿ-ಮಥುರಾ ಬಿಲೌತಿ ಕಟ್ ರೈಲ್ವೆ ಗೇಟ್ ಬಳಿ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಇಬ್ಬರು ಸಹೋದರರು ಮೃತಪಟ್ಟಿದ್ದಾರೆ ಎಂದು ಛಾಟಾ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸಂಜಯ್ ಕುಮಾರ್ ತ್ಯಾಗಿ ತಿಳಿಸಿದ್ದಾರೆ.
ಘಟನಾ ಸ್ಥಳದಿಂದ ಸ್ವಲ್ಪ ದೂರದಲ್ಲಿ ರೈಲ್ವೆ ಹಳಿಯ ಬಳಿ ಅವರ ಬೈಕ್ ನಿಲುಗಡೆ ಮಾಡಿರುವುದು ಪತ್ತೆಯಾಗಿದ್ದು, ಬೈಕ್‌ನ ನೋಂದಣಿ ಸಂಖ್ಯೆಯ ಸಹಾಯದಿಂದ ತನಿಖೆ ನಡೆಸಿದಾಗ ಅವರ ಬಗ್ಗೆ ಮಾಹಿತಿ ಲಭಿಸಿದೆ ಎಂದು ಎಸ್‌ಎಚ್‌ಒ ಹೇಳಿದ್ದಾರೆ.
ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.