HEALTH TIPS

ಸಿವಿಲ್ ಸರ್ವೀಸ್ ತರಬೇತಿಗೆ ಅರ್ಜಿ ಆಹ್ವಾನ

ಕಾಸರಗೋಡು: ಸಿವಿಲ್ ಸರ್ವೀಸ್ ತರಬೇತಿಗೆ ಪರಿಶಿಷ್ಟ ವರ್ಗದ ಯುವತಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ. 30 ವರ್ಷದೊಳಗಿನ 50 ಶೇ. ಅಂಕಗಳೊಂದಿಗೆ ಪದವಿ ಅರ್ಹತೆಯಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೊದಲ ಹಂತದಲ್ಲಿ ಗರಿಷ್ಠ 50 ಅಭ್ಯರ್ಥಿಗಳಿಗೆ ಸಂಪೂರ್ಣವಾಗಿ ಮೆರಿಟ್ ಆಧಾರದ ಮೇಲೆ ಪ್ರವೇಶಾತಿ ನೀಡಲಾಗುವುದು. ನಂತರ ತಿರುವನಂತಪುರದಲ್ಲಿ ನಡೆಯುವ ಒಂದು ತಿಂಗಳ ಓರಿಯಂಟೇಶನ್ ಕೋರ್ಸ್‍ಗೆ ಹಾಜರಾಗಬೇಕಾಗಿದೆ. ಓರಿಯಂಟೇಶನ್ ಕೋರ್ಸ್‍ನ ನಂತರ ನಡೆಸುವ ಸ್ಕ್ರೀನಿಂಗ್ ಪರೀಕ್ಷೆ ಮತ್ತು ಸಂದರ್ಶನದ ನಂತರ ಆಯ್ಕೆಯಾದ ಗರಿಷ್ಠ 30 ಅಭ್ಯರ್ಥಿಗಳಿಗೆ ರಾಜ್ಯದಲ್ಲಿ ಆಯ್ಕೆಮಾಡಿದ ಕೋಚಿಂಗ್ ಸಂಸ್ಥೆಗಳಲ್ಲಿ ಒಂದು ವರ್ಷದ ಕೋರ್ಸ್‍ಗೆ ಸೇರಲು ಅವಕಾಶ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಪರಿಶಿಷ್ಟ ವರ್ಗ ಅಭಿವೃದ್ಧಿ ಕಛೇರಿ ಮತ್ತು ಪರಿಶಿಷ್ಟ ವರ್ಗ ವಿಸ್ತರಣಾ ಕಛೇರಿಗಳಿಂದ ಲಭ್ಯವಿರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ  ಅರ್ಹತೆ, ಜಾತಿ ಮತ್ತು ಆದಾಯ ಪ್ರಮಾಣಪತ್ರಗಳ ಪ್ರತಿಗಳೊಂದಿಗೆ ಅಕ್ಟೋಬರ್ 31 ರೊಳಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries