HEALTH TIPS

ಧರ್ಮತ್ತಡ್ಕ ಪ್ರೌಢಶಾಲೆಯಲ್ಲಿ ಶಾಲಾ ಕಲೋತ್ಸವ

ಕುಂಬಳೆ: ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ ಪ್ರೌಢಶಾಲಾ ವಿಭಾಗದ ಶಾಲಾ ಕಲೋತ್ಸವವು ನಿನ್ನೆ ನಡೆಯಿತು. ಲೇಖಕಿ ಪ್ರಸ್ನನ ವಿ ಚೆಕ್ಕೆಮನೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.ಏಷ್ಯಾದಲ್ಲೇ ಅತೀ ದೊಡ್ಡ ಉತ್ಸವಗಳಲ್ಲೊಂದಾದ ಕೇರಳ ಶಾಲಾ ಕಲೋತ್ಸವವು ಮಕ್ಕಳಲ್ಲಿ ಅಡಕವಾಗಿರುವ ಸುಪ್ತ ಪ್ರತಿಭೆಯನ್ನು ಹೊರತರುವ ಉತ್ತಮ ವೇದಿಕೆಯಾಗಿದ್ದು, ಎಲ್ಲರೂ ಸ್ಪರ್ಧಾ ಮನೋಭಾವದಿಂದ ಉತ್ಸಾಹದಿಂದ ಪಾಲ್ಗೊಳ್ಳಬೇಕೆಂದು ಸಲಹೆ ನೀಡಿದರು. 

ಪಿ.ಟಿ.ಎ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಕುಡಾಲ್ ಸಭಾಧ್ಯಕ್ಷತೆ ವಹಿಸಿದ್ದರು. ಶಾಲಾ ವ್ಯವಸ್ಥಾಪಕ  ಶಂಕರ ನಾರಾಯಣ ಭಟ್, ಮುಖ್ಯೋಪಾಧ್ಯಾಯ  ಇ.ಎಚ್ ಗೋವಿಂದ ಭಟ್, ಎಂ.ಪಿ.ಟಿ.ಎ ಅಧ್ಯಕ್ಷೆ ದಿವ್ಯಭಾರತಿ, ನೌಕರ ಸಂಘದ ಕಾರ್ಯದರ್ಶಿ ರಾಮಕೃಷ್ಣ ಭಟ್, ಕಲೋತ್ಸವ ಸಂಚಾಲಕಿ  ತುಳಸಿ ಕೆ , ಸಂಸ್ಕøತೋತ್ಸವ ಸಂಚಾಲಕ  ಶಿವನಾರಾಯಣ ಭಟ್ ಶುಭ ಹಾರೈಸಿದರು. ಕಾರ್ಯಕ್ರಮವನ್ನು ದೀಪಜ್ವಲನೆಯ ಮೂಲಕ ಉದ್ಘಾಟಿಸಲಾಯಿತು. ಉಮಾದೇವಿ ಸ್ವಾಗತಿಸಿ, ವಿಚೇತ ವಂದಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಶಿಧರ ಕೆ ಮುಖ್ಯ ಅತಿಥಿಯ ಪರಿಚಯ ಮಾಡಿದರು.  ಪ್ರಶಾಂತ ಹೊಳ್ಳ ಎನ್ ಕಾರ್ಯಕ್ರಮ ನಿರೂಪಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries