ಪಟ್ನಾ: ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ (ಜೆಎಸ್‌ಪಿ) ಬಿಹಾರದ ವಿಧಾನಸಭೆಯ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದೆ.
0
samarasasudhi
ಅಕ್ಟೋಬರ್ 22, 2024
ಪಟ್ನಾ: ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ (ಜೆಎಸ್‌ಪಿ) ಬಿಹಾರದ ವಿಧಾನಸಭೆಯ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದೆ.
ಪಕ್ಷ ಘೋಷಣೆಯಾಗಿ ಕೆಲ ತಿಂಗಳುಗಳ ಬಳಿಕ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದೆ.
ಈಗಾಗಲೇ ಸೇನಾ ಪಡೆಯ ಮಾಜಿ ಉಪ ಮುಖ್ಯಸ್ಥ, ಲೆಫ್ಟಿನಂಟ್ ಜನರಲ್ ಕೃಷ್ಣ ಸಿಂಗ್ ಅವರನ್ನು 'ತರಾರಿ' ವಿಧಾನಸಭೆ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ.
ಇದೀಗ ರಾಮಗಢ ವಿಧಾನಸಭಾ ಸ್ಥಾನಕ್ಕೆ ಸುಶೀಲ್ ಕುಶ್ವಾಹ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಯಿತು. ಮಂಗಳವಾರ ಕೈಮೂರ್ ಜಿಲ್ಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಿಶೋರ್ ಈ ಘೋಷಣೆ ಮಾಡಿದರು.
ಮುಂದಿನ ದಿನಗಳಲ್ಲಿ ಉಳಿದ ಎರಡು ವಿಧಾನಸಭಾ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.
ಕುಶ್ವಾಹ ಅವರು ಬಿಎಸ್‌ಪಿಯ ಮಾಜಿ ನಾಯಕರು. ಇವರು 2019ರ ಲೋಕಸಭಾ ಚುನಾವಣೆಯಲ್ಲಿ ಬಕ್ಸರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇದರಲ್ಲಿ ರಾಮಗಢ ವಿಧಾನಸಭಾ ಕ್ಷೇತ್ರವೂ ಸೇರಿದೆ.
ತರಾರಿ (ಎಸ್‌ಸಿ), ರಾಮಗಢ, ಇಮಾಮ್‌ಗಂಜ್ (ಎಸ್‌ಸಿ) ಹಾಗೂ ಬೆಲಗಂಜ್ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದ್ದು, 23ರಂದು ಫಲಿತಾಂಶ ಪ್ರಕಟವಾಗಲಿದೆ.