ಮುಂಬೈ: ರತನ್ ಟಾಟಾ ಅವರ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ಟಾಟಾ ಟ್ರಸ್ಟ್ ಅವಿರತವಾಗಿ ಶ್ರಮಿಸಲಿದೆ ಎಂದು ಟಾಟಾ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಾಹಕ ಸಿದ್ಧಾರ್ಥ್ ಶರ್ಮಾ ಹೇಳಿದ್ದಾರೆ.
0
samarasasudhi
ಅಕ್ಟೋಬರ್ 10, 2024
ಮುಂಬೈ: ರತನ್ ಟಾಟಾ ಅವರ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ಟಾಟಾ ಟ್ರಸ್ಟ್ ಅವಿರತವಾಗಿ ಶ್ರಮಿಸಲಿದೆ ಎಂದು ಟಾಟಾ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಾಹಕ ಸಿದ್ಧಾರ್ಥ್ ಶರ್ಮಾ ಹೇಳಿದ್ದಾರೆ.
ಟಾಟಾ ಸಮೂಹಗಳಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕೆಂದು ಶರ್ಮಾ ತಿಳಿಸಿದ್ದಾರೆ.
ಟಾಟಾ ಟ್ರಸ್ಟ್ ಲಾಭೋದ್ದೇಶವಿಲ್ಲದ ಸಮೂಹವಾಗಿದ್ದು, ಉಪ್ಪಿನಿಂದ ಸಾಫ್ಟ್‌ವೇರ್ ಉದ್ಯಮದವರೆಗೂ ಮುಂಚುಣಿಯಲ್ಲಿದೆ. ಟಾಟಾ ಟ್ರಸ್ಟ್‌ನ ಅಧ್ಯಕ್ಷರಾಗಿದ್ದ ಅವರು (ರತನ್ ಟಾಟಾ), ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವ ಪದ್ಮವಿಭೂಷಣಕ್ಕೆ ಭಾಜನಾರಾಗಿದ್ದರು ಎಂದು ಶರ್ಮಾ ಹೇಳಿದ್ದಾರೆ.
ರತನ್ ಟಾಟಾ ಅವರ ಭೌತಿಕ ಅನುಪಸ್ಥಿತಿಯನ್ನು ಟ್ರಸ್ಟ್ ಅನುಭವಿಸಲಿದೆ. ಆದರೆ ಅವರು ಸದಾ ನಮ್ಮ ಹೃದಯದಲ್ಲಿರುತ್ತಾರೆ ಎಂದು ಶರ್ಮಾ ತಿಳಿಸಿದ್ದಾರೆ.
ಬುಧವಾರ ಬೆಳಿಗ್ಗೆ ಅವರ ಆರೋಗ್ಯಸ್ಥಿತಿಯಲ್ಲಿ ಏರುಪೇರು ಕಾಣಿಸಿಕೊಂಡ ಕಾರಣ ಅವರನ್ನು ಮುಂಬೈನ ಬ್ರೀಚ್‌ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ಸುಮಾರಿಗೆ 11.30ಗೆ ಅವರು ನಿಧನರಾದರು.