ನವದೆಹಲಿ: ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಉದ್ವಿಗ್ನತೆಯಿಂದಾಗಿ ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾರ್ಗಸೂಚಿ ಹೊರಡಿಸಿದೆ.
0
samarasasudhi
ಅಕ್ಟೋಬರ್ 02, 2024
ನವದೆಹಲಿ: ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಉದ್ವಿಗ್ನತೆಯಿಂದಾಗಿ ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾರ್ಗಸೂಚಿ ಹೊರಡಿಸಿದೆ.
'ಸಾಧ್ಯವಾದಷ್ಟು ಇರಾನ್‌ಗೆ ಅನಗತ್ಯ ಪ್ರಯಾಣವನ್ನು ತಪ್ಪಿಸಿ, ಸಚಿವಾಲಯ ಪರಿಸ್ಥಿತಿಯನ್ನು ಗಮನಿಸುತ್ತಿದೆ. ಪ್ರಸ್ತುತ ಇರಾನ್‌ನಲ್ಲಿ ನೆಲೆಸಿದವರೂ ಜಾಗರೂಕರಾಗಿರಿ. ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಿ' ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ.
ಇಸ್ರೇಲ್ ಪಡೆ ಇತ್ತೀಚೆಗೆ ಹಿಜ್ಬುಲ್ಲಾ ಮತ್ತು ಉನ್ನತ ಕಮಾಂಡರ್‌ಗಳ ಮೇಲೆ ನಡೆಸಿದ ದಾಳಿ ಪ್ರತೀಕಾರವಾಗಿ ಇರಾನ್, ಇಸ್ರೇಲ್ ಮೇಲೆ ಮಂಗಳವಾರ ರಾತ್ರಿ ಕ್ಷಿಪಣಿ ದಾಳಿ ನಡೆಸಿದೆ.
ಹೀಗಾಗಿ, ಟೆಲ್ ಅವೀವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಇಸ್ರೇಲ್‌ನಲ್ಲಿರುವ ಭಾರತೀಯ ಪ್ರಜೆಗಳಿಗೆ ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ಸೂಚಿಸಿದಂತೆ ಮಾರ್ಗಸೂಚಿಯನ್ನು ಪಾಲಿಸುವಂತೆ ಸಲಹೆ ನೀಡಿತ್ತು.