HEALTH TIPS

ತಮಿಳುನಾಡಿನ 12 ಮೀನುಗಾರರನ್ನು ವಶಕ್ಕೆ ಪಡೆದ ಶ್ರೀಲಂಕಾ ನೌಕಾಪಡೆ

 ಚೆನ್ನೈ: ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ 12 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ವಶಕ್ಕೆ ಪಡೆದಿದೆ ಎಂದು ಮೀನುಗಾರಿಕೆ ಇಲಾಖೆ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಗಡಿ ಪ್ರದೇಶದಲ್ಲಿ ಮೀನುಗಾರಿಕೆ ಮಾಡುತ್ತಿದ್ದರು ಎನ್ನುವ ಆರೋಪದ ಮೇಲೆ ನ.11ರ ರಾತ್ರಿ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ವಶಕ್ಕೆ ಪಡೆದಿದೆ ಎಂದು ಇಲಾಖೆ ತಿಳಿಸಿದೆ.

ಲಂಕಾ ನೌಕಾಪಡೆಯಿಂದ ಬಂಧನಕ್ಕೊಳಗಾದ ಮೀನುಗಾರರನ್ನು ಆದಷ್ಟು ಬೇಗ ಬಿಡುಗಡೆಗೊಳಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿ ರಾಮೇಶ್ವರಂನಲ್ಲಿರುವ ಇತರ ಮೀನುಗಾರರು ಪ್ರತಿಭಟನೆ ನಡೆಸಿದ್ದಾರೆ.

ಇದೇ ವೇಳೆ ತಮಿಳುನಾಡಿನ ಮೀನುಗಾರರನ್ನು ಹೀಗೆ ಪದೇ ಪದೇ ಬಂಧಿಸದಂತೆ ಹಾಗೂ ಹಡಗುಗಳನ್ನು ವಶಪಡಿಸಿಕೊಳ್ಳದಂತೆ ತಡೆಯಬೇಕು ಎಂದು ಬೇಡಿಕೆಯಿಟ್ಟಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries