ಬೀಜಿಂಗ್: ಚೀನಾದ ಪೂರ್ವ ನಗರ ವುಕ್ಸಿಯ ಶಾಲೆಯೊಂದರಲ್ಲಿ ವಿದ್ಯಾರ್ಥಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ. ಶನಿವಾರ ಸಂಜೆ ನಡೆದ ಈ ಘಟನೆಯಲ್ಲಿ ಎಂಟು ಮಂದಿ ಮೃತಪಟ್ಟು, 17 ಜನರು ಗಾಯಗೊಂಡಿದ್ದಾರೆ.
0
samarasasudhi
ನವೆಂಬರ್ 18, 2024
ಬೀಜಿಂಗ್: ಚೀನಾದ ಪೂರ್ವ ನಗರ ವುಕ್ಸಿಯ ಶಾಲೆಯೊಂದರಲ್ಲಿ ವಿದ್ಯಾರ್ಥಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ. ಶನಿವಾರ ಸಂಜೆ ನಡೆದ ಈ ಘಟನೆಯಲ್ಲಿ ಎಂಟು ಮಂದಿ ಮೃತಪಟ್ಟು, 17 ಜನರು ಗಾಯಗೊಂಡಿದ್ದಾರೆ.
ಶಾಲೆಯ ಹಳೇ ವಿದ್ಯಾರ್ಥಿಯಾಗಿರುವ 21 ವರ್ಷ ಆರೋಪಿ, ಈ ವರ್ಷ ಪದವಿ ಪೂರ್ಣಗೊಳಿಸುವ ನಿರೀಕ್ಷೆಯಲ್ಲಿದ್ದ. ಆದರೆ, ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದ. ಇದರಿಂದ ಕುಪಿತನಾದ ಆತ, ತನ್ನ ಸಿಟ್ಟನ್ನು ತೀರಿಸಿಕೊಳ್ಳುವ ಸಲುವಾಗಿ ಶಾಲೆಗೆ ತೆರಳಿ ಕೃತ್ಯವೆಸಗಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿ ಸಂತ್ರಸ್ತರಿಗೆ ಚಿಕಿತ್ಸೆ ಮುಂದುವರಿದಿದೆ ಎಂದೂ ಹೇಳಿದ್ದಾರೆ.
ಚೀನಾದ ದಕ್ಷಿಣಕ್ಕಿರುವ ಝಹೈ ನಗರದಲ್ಲಿ ಕೆಲವು ದಿನಗಳ ಹಿಂದಷ್ಟೇ ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿತ್ತು. ಕ್ರೀಡಾ ಕೇಂದ್ರವೊಂದರ ಹೊರಗೆ ನಿಂತಿದ್ದ ಜನರ ಗುಂಪಿನ ಮೇಲೆ ಕಾರು ಹರಿಸಿದ ಪರಿಣಾಮ 35 ಜನರು ಸಾವನ್ನಪ್ಪಿದ್ದರು. 43 ಮಂದಿ ಗಾಯಗೊಂಡಿದ್ದರು.