ಮಂಜೇಶ್ವರ: ಮಂಜೇಶ್ವರ ಸನಿಹದ ಮೂಡಂಬೈಲು ಸರ್ಕಾರಿ ಪ್ರೌಢ ಶಾಲೆಯಲ್ಲಿ ಶತಮಾನೋತ್ಸವ ಸಮಾರಂಭ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ವರ್ಷಾಚರಣೆಯ ಉದ್ಘಾಟನಾ ಸಮಾರಂಭ ಡಿಸೆಂಬರ್ 1 ರಂದು ಬೆಳಗ್ಗೆ 10.30ಕ್ಕೆ ಶಾಲಾ ಪ್ರಾಂಗಣದಲ್ಲಿ ನಡೆಯಲಿದೆ.
ಸಾಮಾಜಿಕ ಕಾರ್ಯಕರ್ತ ಪದ್ಮಶ್ರೀ ಪುರಸ್ಕøತ ಅಕ್ಷರ ಸಂತ ಹರೇಕಳ ಹಾಜಬ್ಬ ಸಮಾರಂಭ ಉದ್ಘಾಟಿಸುವರು. ಮಿಂಜ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಂದರಿ ಆರ್. ಶೆಟ್ಟಿ ಅಧ್ಯಕ್ಷತೆ ವಹಿಸುವರು. ಕಾಸರಗೋಡು ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕ ಡಾ. ರತ್ನಾಕರ ಮಲ್ಲಮೂಲೆ ಮುಖ್ಯ ಅತಿಥಿಗಳಾಗಿರುವರು. ಕಾಸರಗೋಡು ಜಿಲ್ಲಾಪಂಚಾಯಿತಿ ಸದಸ್ಯೆ ಕಮಲಾಕ್ಷಿ ಕೆ. ಪಾವೂರು, ಮೀಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯರಾಮ ಬಲ್ಲಂಗುಡೇಲು, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯೆ ಅಶ್ವಿನಿ ಎಂ.ಎಲ್, ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ್ ವಿ, ಮಂಜೇಶ್ವರ ಸಹಾಯಕ ಶಿಕ್ಷಣಾಧಿಕಾರಿ ರಾಜಗೋಪಾಲ, ಮಂಜೇಶ್ವರ ಬ್ಲಾಕ್ ಯೋಜನಾ ಸಂಯೋಜಕ ಜಾಯ್ ಜಿ, ಶಾಲಾ ಬೆಂಬಲ ಸಮಿತಿ ಅಧ್ಯಕ್ಷ ಶಿವರಾಮ ಪದಕಣ್ಣಾಯ ಶುಭಾಶಂಸಣೆಗೈಯಲಿರುವರು.
ರಕ್ಷಕ - ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ಲಾ ಪಜಿಂಗಾರ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮ್ ಪ್ರಕಾಶ್ ಆಳ್ವ, ಮಾತೃಸಂಘದ ಅಧ್ಯಕ್ಷೆ ಸುಮಿತಾ ಎ.ಎಸ್, ಶಾಲ ಮುಖ್ಯೋಪಾಧ್ಯಾಯ ಜಾರ್ಜ್ ಕ್ರಾಸ್ತ ಸಿ.ಎಚ್, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ವಕೀಲ ಎಂ. ದಾಮೋದರ ಶೆಟ್ಟಿ ಉಪಸ್ಥಿತರಿರುವರು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.






