ನವದೆಹಲಿ: ಮಣಿಪುರದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಹೆಚ್ಚುವರಿ 2 ಸಾವಿರ ಸಿಬ್ಬಂದಿ ಒಳಗೊಂಡ 20 ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ತುಕಡಿಯನ್ನು ರವಾನಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
0
samarasasudhi
ನವೆಂಬರ್ 13, 2024
ನವದೆಹಲಿ: ಮಣಿಪುರದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಹೆಚ್ಚುವರಿ 2 ಸಾವಿರ ಸಿಬ್ಬಂದಿ ಒಳಗೊಂಡ 20 ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ತುಕಡಿಯನ್ನು ರವಾನಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಏರ್‌ಲಿಪ್ಟಿಂಗ್ ಮತ್ತು ತಕ್ಷಣದ ಕಾರ್ಯಾಚರಣೆಗಾಗಿ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಗೃಹ ಸಚಿವಾಲಯ ಮಂಗಳವಾರ ರಾತ್ರಿ ಆದೇಶ ಹೊರಡಿಸಿದೆ.
ಸೋಮವಾರ (ನ.11) ಜಿರೀಬಾಮ್ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 10 ಮಂದಿ ಶಂಕಿತ ಉಗ್ರರ ಹತ್ಯೆ ಮಾಡಲಾಗಿತ್ತು. ಹೀಗಾಗಿ ಮಣಿಪುರದಲ್ಲಿ ಮತ್ತೆ ಸಂಘರ್ಷ ಆರಂಭವಾಗಿದ್ದು, ಜನ ಆತಂಕಗೊಂಡಿದ್ದಾರೆ.
20 ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ತುಕಡಿಯಲ್ಲಿ 15 ಸಿಆರ್‌ಪಿಎಫ್ ಮತ್ತು ಐದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ತುಕಡಿಯೂ ಸೇರಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ವರ್ಷ ಮೇ ತಿಂಗಳಲ್ಲಿ ಮಣಿಪುರದಲ್ಲಿ ಆರಂಭವಾದ ಜನಾಂಗೀಯ ಹಿಂಸಾಚಾರದಲ್ಲಿ ಈ ವರೆಗೆ ಸುಮಾರು 200 ಜನ ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಸಿಎಪಿಎಫ್‌ಗಳ 198 ತುಕಡಿಗಳ ಜತೆಗೆ ಈ ಹೊಸ ತುಕಡಿಗಳು ಸೇರ್ಪಡೆಯಾಗಲಿವೆ.