ತಿರುವನಂತಪುರಂ: ಈ ಶೈಕ್ಷಣಿಕ ವರ್ಷದ ಎಸ್‍ಎಸ್‍ಎಲ್‍ಸಿ ಮತ್ತು ಹೈಯರ್ ಸೆಕೆಂಡರಿ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಲಾಗಿದೆ. ಮಾರ್ಚ್ 3 ರಿಂದ 26 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿದೆ.
ದ್ವಿತೀಯ ವರ್ಷದ ಹೈಯರ್ ಸೆಕೆಂಡರಿ ಪರೀಕ್ಷೆಯೂ ಮಾರ್ಚ್ 3 ರಿಂದ 26 ರವರೆಗೆ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಪರೀಕ್ಷೆ ಆರಂಭವಾಗಲಿದೆ.
ಪ್ರಥಮ ವರ್ಷದ ಹೈಯರ್ ಸೆಕೆಂಡರಿ ಪರೀಕ್ಷೆಯು ಮಾರ್ಚ್ 6 ರಿಂದ 29 ರವರೆಗೆ ನಡೆಯಲಿದೆ. ಮೊದಲ ವಷರ್Àದ ಹೈಯರ್ ಸೆಕೆಂಡರಿ ಪರೀಕ್ಷೆಗಳು ಮಧ್ಯಾಹ್ನ 2 ರಿಂದ ಆರಂಭವಾಗುವುದು.
ಪ್ರಥಮ ವರ್ಷದ ವೊಕೇಶನಲ್ ಹೈಯರ್ ಸೆಕೆಂಡರಿ ಪರೀಕ್ಷೆಯು ಮಾರ್ಚ್ 6 ರಿಂದ 29 ರವರೆಗೆ ಮತ್ತು ದ್ವಿತೀಯ ವರ್ಷದ ಪರೀಕ್ಷೆಯು ಮಾರ್ಚ್ 3 ರಿಂದ 26 ರವರೆಗೆ ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದರು. ಒಂದರಿಂದ ಒಂಬತ್ತನೇ ತರಗತಿಯ ಪರೀಕ್ಷೆ ಫೆಬ್ರವರಿ ಅಂತ್ಯಕ್ಕೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ವಿ.ಶಿªನ್ Àಕುಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಎಸ್‍ಎಸ್‍ಎಲ್‍ಸಿ ಮಾದರಿ ಪರೀಕ್ಷೆ ಫೆಬ್ರವರಿ 17 ರಿಂದ 21 ರವರೆಗೆ ನಡೆಯಲಿದೆ. ಅಂತಿಮ ಪರೀಕ್ಷೆಯ ಮೌಲ್ಯಮಾಪನ ಏಪ್ರಿಲ್ 8ರಂದು ಆರಂಭವಾಗಲಿದೆ. 72 ಶಿಬಿರಗಳಲ್ಲಿ ಮೌಲ್ಯಮಾಪನ ನಡೆಯಲಿದೆ. ಮೇ ಮೂರನೇ ವಾರದೊಳಗೆ ಫಲಿತಾಂಶ ಪ್ರಕಟವಾಗಲಿದೆ.


