ಮುಂಬೈ: 'ಕ್ರೈಂ ಪ್ಯಾಟ್ರೋಲ್' ಖ್ಯಾತಿಯ ಕಿರುತೆರೆ ನಟ ನಿತಿನ್ ಚೌಹಾಣ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ. ಅವರಿಗೆ 35 ವರ್ಷ ವಯಸ್ಸಾಗಿತ್ತು.
0
samarasasudhi
ನವೆಂಬರ್ 09, 2024
ಮುಂಬೈ: 'ಕ್ರೈಂ ಪ್ಯಾಟ್ರೋಲ್' ಖ್ಯಾತಿಯ ಕಿರುತೆರೆ ನಟ ನಿತಿನ್ ಚೌಹಾಣ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ. ಅವರಿಗೆ 35 ವರ್ಷ ವಯಸ್ಸಾಗಿತ್ತು.
ಗುರುವಾರ ರಾತ್ರಿ ಮುಂಬೈನ ಅಪಾರ್ಟ್‌ಮೆಂಟ್ ಒಂದರಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ನಿತಿನ್ ಅವರ ಮೃತದೇಹ ಪತ್ತೆಯಾಗಿದೆ.
ನಿತಿನ್ ಅವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಅವರ ಸಾವಿನ ಸುದ್ದಿಯನ್ನು ಅವರ ಸ್ನೇಹಿತರು, ಕುಟುಂಬದವರು ಖಚಿತಪಡಿಸಿದ್ದಾರೆ ಎಂದು ಎನ್‌ಡಿಟಿವಿ ವೆಬ್‌ಸೈಟ್ ವರದಿ ಮಾಡಿದೆ.
ಉತ್ತರ ಪ್ರದೇಶ ಆಲಿಘಡ ಮೂಲದ ನಿತಿನ್, ಹಿಂದಿಯ ದಾದಾಗಿರಿ-2 ರಿಯಾಲಿಟಿ ಶೋ ವಿಜೇತರಾಗಿದ್ದರು. ಇದಲ್ಲದೇ ಅನೇಕ ರಿಯಾಲಿಟಿ ಶೋ, ಹಿಂದಿ ಧಾರಾವಾಹಿಗಳ ಮೂಲಕ ಅವರು ಕಿರುತೆರೆಯಲ್ಲಿ ಮಿಂಚಿದ್ದರು.
ನಿತ್ಯ ಸುದ್ದಿಗಳಿಗಾಗಿ ಸಮರಸ ಸುದ್ದಿ. ಡಾಟ್ ಕಾಂ ಗೆ ಭೇಟಿ ನೀಡಿ.
ಜನಪರ, ಕ್ರಿಯಾತ್ಮಕ ಮಾಧ್ಯಮಗಳಿಗೆ ಜನಬೆಂಬಲ ಅಗತ್ಯ
ನಿತ್ಯ ಸತ್ಯದೊಂದಿಗೆ ಧನಾತ್ಮಕ ಸಮಾಜ ನಿರ್ಮಾಣದ ಲಕ್ಷ್ಯವಿರಿಸಿ ಮುನ್ನಡೆಯುತ್ತಿರುವ ಸಮರಸ ಸುದ್ದಿ ಬಳಗಕ್ಕೆ ನಿಮ್ಮ ಬೆಂಬಲ ಅತ್ಯಗತ್ಯ.
ಸಮರಸ ಸುದ್ದಿ.ಡಾಟ್ ಕಾಮ್ ಗೆ ದೇಣಿಗೆ ನೀಡಿ ಹೆಗಲು ನೀಡಿ.
ಈ ಕೆಳಗಿನ ಸ್ಕ್ಯಾನರ್ ಮೂಲಕ ಗೂಗಲ್ ಪೇ ಮಾಡಲು ಕ್ಲಿಕ್ ಮಾಡಿ.
ಇದು ಗಡಿನಾಡು ಕಾಸರಗೋಡಿನ ಜನಧ್ವನಿ.