ನವದೆಹಲಿ: ಉಪ ಚುನಾವಣೆ ನಡೆಯುತ್ತಿರುವ ಪಂಜಾಬ್ ಹಾಗೂ ಉತ್ತರ ಪ್ರದೇಶದಲ್ಲಿ ಮತದಾನದ ದಿನವೇ ಗುಂಪುಗಳ ನಡುವೆ ಘರ್ಷಣೆಯಾಗಿದೆ.
0
samarasasudhi
ನವೆಂಬರ್ 20, 2024
ನವದೆಹಲಿ: ಉಪ ಚುನಾವಣೆ ನಡೆಯುತ್ತಿರುವ ಪಂಜಾಬ್ ಹಾಗೂ ಉತ್ತರ ಪ್ರದೇಶದಲ್ಲಿ ಮತದಾನದ ದಿನವೇ ಗುಂಪುಗಳ ನಡುವೆ ಘರ್ಷಣೆಯಾಗಿದೆ.
ಘಟನೆ ವೇಳೆ ಸ್ಥಳದಲ್ಲಿದ್ದ ಕಾಂಗ್ರೆಸ್ ಸಂಸದ ಸುಖ್‌ಜಿಂದರ್ ಸಿಂಗ್ ರಾಂಧವ ಅವರು, ಗೂಂಡಾಗಳು ಸಮಸ್ಯೆ ಸೃಷ್ಟಿಸಲು ಯತ್ನಿಸಿದರು. ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶದದ ಮುಜಾಫರ್‌ನಗರ ಜಿಲ್ಲೆಯ ಮೀರಾಪುರ ಕ್ಷೇತ್ರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿದೆ.
ಕಾಕರೊಲಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಮತದಾನ ಮುಂದುವರಿದಿದೆ ಎಂದು ಮಜಾಫರ್‌ನಗರ ಎಸ್‌ಎಸ್‌ಪಿ ಅಭಿಷೇಕ್ ಸಿಂಗ್ ಹೇಳಿದ್ದಾರೆ.