ಮುಂಬೈ: ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಗುರುವಾರ) ಮತ್ತಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
0
samarasasudhi
ನವೆಂಬರ್ 08, 2024
ಮುಂಬೈ: ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಗುರುವಾರ) ಮತ್ತಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣದಲ್ಲಿ ಈವರೆಗೆ 18 ಮಂದಿಯನ್ನು ಬಂಧಿಸಲಾಗಿದೆ. ಪುಣೆ ನಗರದ ಕರ್ವೇನಗರ ಪ್ರದೇಶದ ನಿವಾಸಿಗಳಾದ ಆದಿತ್ಯ ಗುಲಂಕರ್ (22) ಮತ್ತು ರಫೀಕ್ ನಿಯಾಜ್ ಶೇಖ್ (22)ಬಂಧಿತರು.
ಇವರು ಆರೋಪಿಗಳಾದ ಪ್ರವೀಣ್ ಲೋಂಕರ್ ಮತ್ತು ರೂಪೇಶ್ ಮೊಹೋಲ್ ಅವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಅಕ್ಟೋಬರ್ 12ರಂದು ಮುಂಬೈನ ಬಾಂದ್ರಾ ಪ್ರದೇಶದ ನಿರ್ಮಲ್ ನಗರದಲ್ಲಿರುವ ಶಾಸಕ ಜೀಶನ್ ಸಿದ್ದೀಕಿ ಅವರ ಕಚೇರಿ ಬಳಿ ಬಾಬಾ ಸಿದ್ದೀಕಿ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.