ರಾಯಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲೀಯರು ಮತ್ತು ಭದ್ರತಾ ಪಡೆಗಳ ನಡುವಿನ ಎನ್‌ಕೌಂಟರ್‌ನಲ್ಲಿ ಶುಕ್ರವಾರ ಇಬ್ಬರು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
0
samarasasudhi
ನವೆಂಬರ್ 09, 2024
ರಾಯಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲೀಯರು ಮತ್ತು ಭದ್ರತಾ ಪಡೆಗಳ ನಡುವಿನ ಎನ್‌ಕೌಂಟರ್‌ನಲ್ಲಿ ಶುಕ್ರವಾರ ಇಬ್ಬರು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಾಮೆಡ್ ಗ್ರಾಮದ ಅರಣ್ಯ ಪ್ರದೇಶದಲ್ಲಿ ಬೆಳಗ್ಗೆ ಸುಮಾರು 11 ಗಂಟೆಗೆ ಗುಂಡಿನ ಚಕಮಕಿ ನಡೆದಿದ್ದು ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ಬಸ್ತರ್‌ನ ಪೊಲೀಸ್ ಮಹಾ ನಿರೀಕ್ಷಕ ಸುಂದರ್‌ರಾಜ್ ತಿಳಿಸಿದ್ದಾರೆ.
ಘಟನಾ ಸ್ಥಳದಿಂದ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವರ ಬಳಿ ಸೆಲ್ಫ್ ಲೋಡಿಂಗ್ ರೈಫಲ್ (ಎಸ್‌ಎಲ್‌ಆರ್), ಬ್ಯಾರೆಲ್ ಗ್ರೆನೇಡ್, ಲಾಂಚರ್ ಶೆಲ್‌ಗಳು ಮತ್ತು ಹರಿತವಾದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲಾ ಮೀಸಲು ಪೊಲೀಸ್ ಪಡೆ, ಸಿಆರ್‌ಪಿಎಫ್ ಹಾಗೂ ಕೋಬ್ರಾ ಪಡೆ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಶೋಧ ಕಾರ್ಯ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.
ನಿತ್ಯ ಸುದ್ದಿಗಳಿಗಾಗಿ ಸಮರಸ ಸುದ್ದಿ. ಡಾಟ್ ಕಾಂ ಗೆ ಭೇಟಿ ನೀಡಿ.
ಜನಪರ, ಕ್ರಿಯಾತ್ಮಕ ಮಾಧ್ಯಮಗಳಿಗೆ ಜನಬೆಂಬಲ ಅಗತ್ಯ
ನಿತ್ಯ ಸತ್ಯದೊಂದಿಗೆ ಧನಾತ್ಮಕ ಸಮಾಜ ನಿರ್ಮಾಣದ ಲಕ್ಷ್ಯವಿರಿಸಿ ಮುನ್ನಡೆಯುತ್ತಿರುವ ಸಮರಸ ಸುದ್ದಿ ಬಳಗಕ್ಕೆ ನಿಮ್ಮ ಬೆಂಬಲ ಅತ್ಯಗತ್ಯ.
ಸಮರಸ ಸುದ್ದಿ.ಡಾಟ್ ಕಾಮ್ ಗೆ ದೇಣಿಗೆ ನೀಡಿ ಹೆಗಲು ನೀಡಿ.
ಈ ಕೆಳಗಿನ ಸ್ಕ್ಯಾನರ್ ಮೂಲಕ ಗೂಗಲ್ ಪೇ ಮಾಡಲು ಕ್ಲಿಕ್ ಮಾಡಿ.
ಇದು ಗಡಿನಾಡು ಕಾಸರಗೋಡಿನ ಜನಧ್ವನಿ.