HEALTH TIPS

ಕೇರಳ ರಾಜ್ಯ ಪಿಂಚಣಿದಾರರ ಸಂಘದಿಂದ ಕಾಸರಗೋಡು ಉಪ ಖಜಾನೆ ಎದುರು ಧರಣಿ

ಕಾಸರಗೋಡು: ವಿವಿಧ ಬೇಡಿಕೆ ಮುಂದಿರಿಸಿ ಕೇರಳ ರಾಜ್ಯ ಪಿಂಚಣಿದಾರರ ಸಂಘದ ಕಾಸರಗೋಡು ಬ್ಲಾಕ್ ಸಮಿತಿಯ ಆಶ್ರಯದಲ್ಲಿ ಕಾಸರಗೋಡು ಉಪ ಖಜಾನೆ ಎದುರು ಧರಣಿ ಸತ್ಯಾಗ್ರಹ ನಡೆಯಿತು.

ವೇತನ ಪರಿಷ್ಕರಣಾ ಆಯೋಗವನ್ನು ತಕ್ಷಣ  ನೇಮಿಸಬೇಕು, ಮೆಡಿಸೇಫ್ ನ್ಯೂನತೆಗಳನ್ನು ಸರಿಪಡಿಸಬೇಕು,  ತಡೆಹಿಡಿಯಲಾದ ಬಾಕಿ ಮೊತ್ತ ಬಿಡುಗಡೆಗೊಳಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿರಿಸಿ ಧರಣಿ ಆಯೋಜಿಸಲಾಗಿತ್ತು.

ಧರಣಿಯನ್ನು ಕೇರಳ ರಾಜ್ಯ ಪಿಂಚಣಿದಾರರ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಈಶ್ವರ ರಾವ್ ಉದ್ಘಾಟಿಸಿದರು. ಜಿಲ್ಲಾ ಸಮಿತಿ ಉಪಾಧ್ಯಕ್ಷ  ಪಿ. ಕೇಶವ ಭಟ್ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಅಶೋಕ್ ಬಾಡೂರು, ಕೆ.ಶ್ರೀಧರ ರಾವ್, ಸವಿತಾ ಟೀಚರ್, ಬಲರಾಮ ಭಟ್, ಎಂ.ನಾರಾಯಣ, ಲೀಲಾವತಿ, ಕೇಶವ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.  ಕೇರಳ ರಾಜ್ಯ ಪಿಂಚಣಿದಾರರ ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ನಾಗರಾಜ ಸ್ವಾಗತಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries