ಕಾಸರಗೋಡು: ರಾಜ್ಯ ಪರಿಶಿಷ್ಟ ವರ್ಗ ಅಭಿವೃದ್ಧಿ ಇಲಾಖೆ ನಡೆಸಿಕೊಂಡು ಬರುತ್ತಿರುವ ಅಯ್ಯಂಕಾಳಿ ಸ್ಮಾರಕ ಪ್ರತಿಭಾನ್ವೇಷಣೆ ಮತ್ತು ಅಭಿವೃದ್ಧಿ ಯೋಜನೆಯ ಪ್ರಕಾರ 2024-25 ನೇ ಶೈಕ್ಷಣಿಕ ವರ್ಷದ ಸರ್ಕಾರಿ ಯಾ ಅನುದಾನಿತ ಶಾಲೆಗಳಲ್ಲಿ 5, 8 ನೇ ತರಗತಿಗಳಲ್ಲಿ ಕಲಿಯುತ್ತಿರುವ ಎಸ್‍ಟಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪರೀಕ್ಷೆಗೆ ಹಾಜರಾಗಲು ಬಯಸುವ ಕಾಸರಗೋಡು ಪರಿಶಿಷ್ಟ ವರ್ಗ ಅಭಿವೃದ್ಧಿ ಕಛೇರಿಯ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ವರ್ಗ ವಿದ್ಯಾರ್ಥಿಗಳಿಗೆ ಅರ್ಜಿ ನಮೂನೆಯು ಕಾಸರಗೋಡು ಪರಿಶಿಷ್ಟ ವರ್ಗ ಅಭಿವೃದ್ಧಿ ಕಛೇರಿ, ಕಾಸರಗೋಡು, ನೀಲೇಶ್ವರಂ, ಎಣ್ಮಕಜೆ ಪರಿಶಿಷ್ಟ ವರ್ಗ ವಿಸ್ತರಣಾ ಕಛೇರಿಗಳಲ್ಲಿ ಲಭ್ಯವಿರಲಿದೆ. ಭರ್ತಿ ಮಾಡಿದ ಅರ್ಜಿಯನ್ನು ಶಾಲಾ ಮುಖ್ಯಸ್ಥರ ದೃಢೀಕರಣದೊಂದಿಗೆ ಪರಿಶಿಷ್ಟ ವರ್ಗ ಅಭಿವೃದ್ಧಿ ಕಛೇರಿ ಕಾಸರಗೋಡು, ಕಾಸರಗೋಡು, ನೀಲೇಶ್ವರಂ ಯಾ ಎಣ್ಮಕಜೆ ಪರಿಶಿಷ್ಟ ವರ್ಗ ವಿಸ್ತರಣಾ ಕಛೇರಿಗಳಿಗೆ ತಲುಪಿಸಬೇಕು. ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಸಂಸ್ಥೆಯ ಮುಖ್ಯಸ್ಥರು ದೃಢೀಕರಿಸಿದ ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿಯ ಮೂಲ ಪ್ರಮಾಣ ಪತ್ರ, ಆಧಾರ್ ಕಾರ್ಡ್ ನಕಲು, ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಆದ್ಯತೆಯ ಅಂಶಗಳನ್ನು ಸಾಬೀತುಪಡಿಸುವ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 10 ಆಗಿದ್ದು, ಹೆಚ್ಚಿನ ವಿವರಗಳಿಗಾಗಿ ಈ ಕಛೇರಿಯನ್ನು ನೇರವಾಗಿ ಅಥವಾ ದೂರವಾಣಿ ಸಂಖ್ಯೆ (04994-255466) ಮೂಲಕ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.




