HEALTH TIPS

ಮಣಿಪುರ | ಶಂಕಿತ ಉಗ್ರರಿಂದ ಅಂಗಡಿಗಳಿಗೆ ಬೆಂಕಿ: ಇಬ್ಬರು ವೃದ್ಧರ ಮೃತದೇಹ ಪತ್ತೆ

 ಇಂಫಾಲ: ಮಣಿಪುರದ ಜಿರೀಬಾಮ್ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಇಬ್ಬರು ವೃದ್ಧರ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಜಕುರಾಧೋರ್ ಕರೋಂಗ್ ಪ್ರದೇಶದಲ್ಲಿ ಶಂಕಿತ ಉಗ್ರರು ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಿದ್ದು, ಇಬ್ಬರು(ವೃದ್ಧರು) ಮೃತಪಟ್ಟಿದ್ದಾ‌ರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐವರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು, ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಪ್ರದೇಶದಲ್ಲಿ ಜಿರೀಬಾಮ್ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries