ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸಲಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಿಸಲಿದ್ದಾರೆ.
0
samarasasudhi
ನವೆಂಬರ್ 13, 2024
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸಲಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಿಸಲಿದ್ದಾರೆ.
ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನವೆಂಬರ್ 14ರಂದು ಬೆಳಿಗ್ಗೆ 10 ಗಂಟೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವನ್ನು ನಿರ್ಮಲಾ ಸೀತಾರಾಮನ್ ಉದ್ಘಾಟಿಸಲಿದ್ದು, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಬಾರ್ಡ್ ಅಧ್ಯಕ್ಷ ಶಾಜಿ ಕೆ.ವಿ. ಮುಂಬೈ, ಗ್ರಾಮಾಭಿವೃದ್ಧಿ ವಿಕಾಸ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮ ಅಧ್ಯಕ್ಷರಾದ ಹೇಮಾವತಿ ಹೆಗ್ಗಡೆ, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭಾಗವಹಿಸಲಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಸುಮಾರು 600 ಕೋಟಿ ರೂ.ಗೂ ಹೆಚ್ಚು ಲಾಭಾಂಶವನ್ನು ಅರ್ಹ ಸಂಘಗಳಿಗೆ ವಿತರಿಸಲಾಗುವುದು.