ಏಲೂರು : ಆಂಧ್ರಪ್ರದೇಶದ ಏಲೂರು ಪಟ್ಟಣದಲ್ಲಿ ಗುರುವಾರ ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ಪಟಾಕಿ ಸ್ಪೋಟಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
0
samarasasudhi
ನವೆಂಬರ್ 01, 2024
ಏಲೂರು : ಆಂಧ್ರಪ್ರದೇಶದ ಏಲೂರು ಪಟ್ಟಣದಲ್ಲಿ ಗುರುವಾರ ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ಪಟಾಕಿ ಸ್ಪೋಟಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದೀಪಾವಳಿ ಹಬ್ಬದ ಆಚರಣೆಗಾಗಿ ಖರೀದಿಸಿದ ಪಟಾಕಿ ಚೀಲವನ್ನು ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.
ಈರುಳ್ಳಿ ಬಾಂಬ್ ಮತ್ತು ಇತರೆ ಪಟಾಕಿಗಳನ್ನು ಹೊಂದಿರುವ ಬ್ಯಾಗ್ ರಸ್ತೆಗೆ ಬಿದ್ದ ಕೂಡಲೇ ಹಠಾತ್ತಾಗಿ ಸ್ಫೋಟಗೊಂಡಿದೆ. ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಹಿಂಬದಿ ಸವಾರ ಮತ್ತು ರಸ್ತೆ ಬದಿಯಲ್ಲಿ ನಿಂತಿದ್ದ ಮತ್ತಿಬ್ಬರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಸಿಸಿಟಿವಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.