HEALTH TIPS

ಪೆರ್ಲ ಶ್ರೀ ಅಯ್ಯಪ್ಪ ಭಜನಾಮಂದಿರ ವಾರ್ಷಿಕೋತ್ಸವ- ಆಮಂತ್ರಣಪತ್ರಿಕೆ ಬಿಡುಗಡೆ

ಪೆರ್ಲ: ಪೆರ್ಲ ಶ್ರೀ ಅಯ್ಯಪ್ಪ ಸ್ವಾಮಿ ಭಜನಾಮಂದಿರದ 48ನೇ ವಾರ್ಷಿಕೋತ್ಸವ, ಶ್ರೀ ಅಯ್ಯಪ್ಪನ್ ತಿರುವಿಳಕ್ಕ್ ಮಹೋತ್ಸವ ಶ್ರೀ ಅಯ್ಯಪ್ಪ ಭಜನಾಮಂದಿರ ವಠಾರದಲ್ಲಿ ನೂತನವಗಿ ನಿರ್ಮಿಸಲಾದ ಶ್ರೀಧರ್ಮಶಾಸ್ತಾ ಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣಪತ್ರಿಕೆ ಬಿಡುಗಡೆ ಸಮಾರಂಭ ಮಂದಿರದಲ್ಲಿ ಜರುಗಿತು.

ಉಕ್ಕಿನಡ್ಕ ಶ್ರೀ ಅಯ್ಯಪ್ಪ ಭಜನಾಮಂದಿರ ಸಮಿತಿ ಅಧ್ಯಕ್ಷ ಡಾ. ಜಯಗೋವಿಂದ ಉಕ್ಕಿನಡ್ಕ ಆಮಂತ್ರಣಪತ್ರಿಕೆ ಬಿಡುಗಡೆಗೊಳಿಸಿದರು. ಉತ್ಸವ ಸಮಿತಿ ಅಧ್ಯಕ್ಷ, ಗುರುಸ್ವಾಮಿ ಶ್ರೀಧರ ಬಜಕೂಡ್ಲು, ಮಂದಿರ ಸಮಿತಿ ಅಧ್ಯಕ್ಷ ಉದಯ ಚೆಟ್ಟಿಯಾರ್, ಚಂದ್ರಶೇಖರ ಆಚಾರ್ಯ ಬಜಕೂಡ್ಲು, ಗ್ರಾಪಂ ಸದಸ್ಯೆ ಉಷಾಗಣೇಶ್, ಸದಾಶಿವ ಭಟ್ ಹರಿನಿಲಯ, ಸುಜಿತ್ ರೈ ಬಜಕೂಡ್ಲು, ಪದ್ಮನಾಭ ಸುವರ್ಣ ಬಜಕೂಡ್ಲು ಉಪಸ್ಥಿತರಿದ್ದರು.

ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಮಾಣಿಲಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಅವರ ಶುಭಾಶೀರ್ವಾದ ಹಾಗೂ ವೇದಮೂರ್ತಿ ಶುಳುವಾಲುಮೂಲೆ ಶಿವಸುಬ್ರಹ್ಮಣ್ಯ ಭಟ್ ಅವರ ಪೌರೋಹಿತ್ಯದಲ್ಲಿಡಿ. 3ರಿಂದ 5ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ವಾರ್ಷಿಕೋತ್ಸವ ಜರುಗಲಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries