ಕೋಲ್ಕತ್ತ: ಕಳೆದ ತಿಂಗಳು ಪಶ್ವಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ನಟ, ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ವಿರುದ್ಧ ಬಿಧಾನನಗರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
0
samarasasudhi
ನವೆಂಬರ್ 07, 2024
ಕೋಲ್ಕತ್ತ: ಕಳೆದ ತಿಂಗಳು ಪಶ್ವಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ನಟ, ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ವಿರುದ್ಧ ಬಿಧಾನನಗರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
'ಚಕ್ರವರ್ತಿ ಅವರ ವಿರುದ್ಧದ ದೂರು ಅಕ್ಟೋಬರ್ 27ರಂದು ಸಾಲ್ಟ್ ಲೇಕ್ ಪ್ರದೇಶದ ಇಡಬ್ಲ್ಯೂಸಿಸಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಮಾಡಿದ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದ್ದಾಗಿದೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲು ಆಯೋಜಿಸಲಾದ ಕಾರ್ಯಕ್ರಮ ಇದಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಚಕ್ರವರ್ತಿ ವಿರುದ್ಧದ ಎಫ್‌ಐಆರ್ ಅನ್ನು 'ಸೇಡಿನ ರಾಜಕಾರಣ' ಎಂದು ಕರೆದಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಸುಕಾಂತ ಮಂಜುದಾರ್, ಅವರ ಭಾಷಣದಲ್ಲಿ ಪ್ರಚೋದನಕಾರಿಯಾದ ಯಾವ ಅಂಶವೂ ಇರಲಿಲ್ಲ. ಪೊಲೀಸರನ್ನು ಬಳಸಿಕೊಂಡು ಬೆದರಿಸುವ ಯತ್ನವಾಗಿದೆ' ಎಂದು ಕಿಡಿಕಾರಿದ್ದಾರೆ.