ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಧಮನ್‌ಗಾಂವ್ ರೈಲು ನಿಲ್ದಾಣದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಕೈಯಲ್ಲಿದ್ದ ಬ್ಯಾಗ್ ಅನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಶನಿವಾರ ಪರಿಶೀಲಿಸಿದ್ದಾರೆ.
0
samarasasudhi
ನವೆಂಬರ್ 16, 2024
ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಧಮನ್‌ಗಾಂವ್ ರೈಲು ನಿಲ್ದಾಣದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಕೈಯಲ್ಲಿದ್ದ ಬ್ಯಾಗ್ ಅನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಶನಿವಾರ ಪರಿಶೀಲಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಗೆ ನ.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್‌ನ ಯಶೋಮತಿ ಠಾಕೂರ್, 'ರಾಜ್ಯಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಬ್ಯಾಗ್‌ಗಳನ್ನು ಅಧಿಕಾರಿಗಳು ಏಕೆ ಪರೀಶೀಲಿಸಿಲ್ಲ' ಎಂದು ವಾಗ್ದಾಳಿ ನಡೆಸಿದ್ದಾರೆ.
ಚುನಾವಣೆ ಘೋಷಣೆಯಾದ ಸಂದರ್ಭದಲ್ಲೇ ಮಾದರಿ ನೀತಿ ಸಂಹಿತೆ ರಾಜ್ಯದಲ್ಲಿ ಜಾರಿಗೆ ಬಂದಿದೆ. ಶಿವಸೇನಾ (ಯುಬಿಟಿ) ಮುಖಂಡ ಉದ್ಧವ್ ಠಾಕ್ರೆ ಅವರು ಯಾವತ್‌ಮಾಲ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಪರಿಶೀಲಿಸಿದ ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳ ಕಾರ್ಯವನ್ನು ವಿಡಿಯೊ ಮಾಡಿದ್ದರು. ಮೋದಿ, ಶಾ, ಶಿಂದೆ, ಫಡಣವೀಸ್ ಹಾಗೂ ಅಜಿತ್ ಪವಾರ್ ಅವರ ಬ್ಯಾಗ್‌ಗಳ ಪರಿಶೀಲನೆ ನಡೆಸದ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದ್ದರು.
ನ. 20ರಂದು ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಅಮರಾವತಿ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲು ರಾಹುಲ್ ಅವರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.