ನಾಗ್ಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್‌ಗೆ ಆಗಮಿಸಿದಾಗಿನಿಂದ ಲೋಕಸಭೆ ಚರ್ಚೆಗಳ ಗುಣಮಟ್ಟ ಕುಸಿದಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
0
samarasasudhi
ನವೆಂಬರ್ 16, 2024
ನಾಗ್ಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್‌ಗೆ ಆಗಮಿಸಿದಾಗಿನಿಂದ ಲೋಕಸಭೆ ಚರ್ಚೆಗಳ ಗುಣಮಟ್ಟ ಕುಸಿದಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ನಾಗ್ಪುರದಲ್ಲಿ ಚುನಾವಣಾ ರ‍್ಯಾಲಿ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ರಾಹುಲ್ ಗಾಂಧಿ ಆಗಮಿಸಿದಾಗಿನಿಂದ ಲೋಕಸಭೆಯಲ್ಲಿ ಚರ್ಚೆಯ ಗುಣಮಟ್ಟ ಕುಸಿದಿದೆ.
ದಲಿತರು, ಆದಿವಾಸಿಗಳು, ಸಂವಿಧಾನ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವ ಹಕ್ಕು ರಾಹುಲ್ ಗಾಂಧಿಗೆ ಇಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಮಹಾಯುತಿ ಪರ ಜನರ ಒಲವಿದೆ. 'ಲಡ್ಕಿ ಬಹಿನ್ ಯೋಜನೆ'ಯಿಂದ ಆಡಳಿತ ಮೈತ್ರಿಕೂಟಕ್ಕೆ ಅನುಕೂಲವಾಗಲಿದೆ ಎಂದು ರಿಜಿಜು ಭರವಸೆ ವ್ಯಕ್ತಪಡಿಸಿದ್ದಾರೆ.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20ರಂದು ಮತದಾನ ನಡೆಯಲಿದೆ. 23ರಂದು ಫಲಿತಾಂಶ ಪ್ರಕಟವಾಗಲಿದೆ.