ಖಾರ್ಗೋನ್:: ಶಾಲಾ ಆವರಣದಲ್ಲಿ ಮೊಬೈಲ್ ಬಳಸದಂತೆ ಹೇಳಿದ್ದಕ್ಕೆ ಹಾಗೂ ಸೆಲ್ಫಿ ತೆಗೆದುಕೊಳ್ಳುದನ್ನು ಪ್ರಶ್ನಿಸಿದ್ದಕ್ಕೆ ಸಿಟ್ಟಾಗಿದ್ದ 12 ನೇ ತರಗತಿಯ ವಿದ್ಯಾರ್ಥಿಯೊಬ್ಬ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದೆ.
0
samarasasudhi
ನವೆಂಬರ್ 09, 2024
ಖಾರ್ಗೋನ್:: ಶಾಲಾ ಆವರಣದಲ್ಲಿ ಮೊಬೈಲ್ ಬಳಸದಂತೆ ಹೇಳಿದ್ದಕ್ಕೆ ಹಾಗೂ ಸೆಲ್ಫಿ ತೆಗೆದುಕೊಳ್ಳುದನ್ನು ಪ್ರಶ್ನಿಸಿದ್ದಕ್ಕೆ ಸಿಟ್ಟಾಗಿದ್ದ 12 ನೇ ತರಗತಿಯ ವಿದ್ಯಾರ್ಥಿಯೊಬ್ಬ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದೆ.
ಖಾರ್ಗೋನ್ ಜಿಲ್ಲೆಯ ಗುಲ್ವಾಡ್‌ನ ಸರ್ಕಾರಿ ಸೆಕೆಂಡೆರಿ ಶಾಲೆಯ ವಿದ್ಯಾರ್ಥಿ ರಾಜ್ ಅನ್ಸಾರಿ (17) ಮೃತನಾಗಿದ್ದಾನೆ.
ಗುಲ್ವಾಡ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿದ್ದುಕೊಂಡು ಓದುತ್ತಿದ್ದ ವಿದ್ಯಾರ್ಥಿ ರಾಜ್, ಬುಧವಾರ ತನ್ನ ಸ್ಮಾರ್ಟ್‌ಫೋನ್ ಅನ್ನು ಶಾಲೆಗೆ ತೆಗೆದುಕೊಂಡು ಬಂದು ಸೆಲ್ಪಿ ತೆಗೆದುಕೊಳ್ಳುತ್ತಿದ್ದ. ಈ ರೀತಿ ಮಾಡದಂತೆ ಶಿಕ್ಷಕರು ಬುದ್ಧವಾದ ಹೇಳಿದ್ದರು.
ಇದರಿಂದ ಕುಪಿತನಾಗಿದ್ದ ವಿದ್ಯಾರ್ಥಿ ಜಾಮ್ ಗೇಟ್ ಎಂಬ ಐತಿಹಾಸಿಕ ಸ್ಥಳದ ಬೆಟ್ಟದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಬದುಕುಳಿಯಲಿಲ್ಲ ಎಂದು ಖಾರ್ಗೋನ್ ಎಸ್‌ಪಿ ಧರ್ಮರಾಜ್ ಮೀನಾ ಅವರು ತಿಳಿಸಿದ್ದಾರೆ.
ನಿತ್ಯ ಸುದ್ದಿಗಳಿಗಾಗಿ ಸಮರಸ ಸುದ್ದಿ. ಡಾಟ್ ಕಾಂ ಗೆ ಭೇಟಿ ನೀಡಿ.
ಜನಪರ, ಕ್ರಿಯಾತ್ಮಕ ಮಾಧ್ಯಮಗಳಿಗೆ ಜನಬೆಂಬಲ ಅಗತ್ಯ
ನಿತ್ಯ ಸತ್ಯದೊಂದಿಗೆ ಧನಾತ್ಮಕ ಸಮಾಜ ನಿರ್ಮಾಣದ ಲಕ್ಷ್ಯವಿರಿಸಿ ಮುನ್ನಡೆಯುತ್ತಿರುವ ಸಮರಸ ಸುದ್ದಿ ಬಳಗಕ್ಕೆ ನಿಮ್ಮ ಬೆಂಬಲ ಅತ್ಯಗತ್ಯ.
ಸಮರಸ ಸುದ್ದಿ.ಡಾಟ್ ಕಾಮ್ ಗೆ ದೇಣಿಗೆ ನೀಡಿ ಹೆಗಲು ನೀಡಿ.
ಈ ಕೆಳಗಿನ ಸ್ಕ್ಯಾನರ್ ಮೂಲಕ ಗೂಗಲ್ ಪೇ ಮಾಡಲು ಕ್ಲಿಕ್ ಮಾಡಿ.