ನವದೆಹಲಿ: ದೆಹಲಿಯ ಶಹದಾರಾದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ 40 ವರ್ಷದ ವ್ಯಕ್ತಿ ಮತ್ತು ಆತನ ಸೋದರಳಿಯ ಸ್ಥಳದಲ್ಲೇ ಮತೃಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
0
samarasasudhi
ನವೆಂಬರ್ 01, 2024
ನವದೆಹಲಿ: ದೆಹಲಿಯ ಶಹದಾರಾದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ 40 ವರ್ಷದ ವ್ಯಕ್ತಿ ಮತ್ತು ಆತನ ಸೋದರಳಿಯ ಸ್ಥಳದಲ್ಲೇ ಮತೃಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಹದಾರಾದ ಫಾರ್ಷ್ ಬಜಾರ್ ಪ್ರದೇಶದಲ್ಲಿರುವ ತಮ್ಮ ಮನೆಯ ಎದುರು ಪಟಾಕಿ ಹಚ್ಚುತ್ತಿದ್ದ ವೇಳೆ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.
ದುಷ್ಕರ್ಮಿಗಳು ಮೊದಲಿಗೆ ಆಕಾಶ್ ಶರ್ಮಾ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದೇ ವೇಳೆ ತಡೆಯಲು ಬಂದ ಬಾಲಕರಿಗೂ ಗುಂಡುಗಳು ತಗುಲಿವೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ಮೇಲ್ನೋಟಕ್ಕೆ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕೃತ್ಯ ಎಸಗಿರುವುದು ಕಂಡುಬಂದಿದೆ. ಪ್ರಕರಣ ಸಂಬಂಧ ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.