ನವದೆಹಲಿ: ರಾಷ್ಟ್ರ ರಾಜಧಾನಿಯ ವಾಯುಮಾಲಿನ್ಯ ಮಟ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸರ್ಕಾರಿ ಕಚೇರಿಗಳ ಅರ್ಧದಷ್ಟು ಸಿಬ್ಬಂದಿ ಮನೆಯಿಂದಲೇ ಕೆಲಸ ಮಾಡಲಿದ್ದಾರೆ ಎಂದು ಪರಿಸರ ಸಚಿವ ಗೋಪಾಲ್ ರಾಯ್ ಬುಧವಾರ ತಿಳಿಸಿದ್ದಾರೆ.
0
samarasasudhi
ನವೆಂಬರ್ 20, 2024
ನವದೆಹಲಿ: ರಾಷ್ಟ್ರ ರಾಜಧಾನಿಯ ವಾಯುಮಾಲಿನ್ಯ ಮಟ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸರ್ಕಾರಿ ಕಚೇರಿಗಳ ಅರ್ಧದಷ್ಟು ಸಿಬ್ಬಂದಿ ಮನೆಯಿಂದಲೇ ಕೆಲಸ ಮಾಡಲಿದ್ದಾರೆ ಎಂದು ಪರಿಸರ ಸಚಿವ ಗೋಪಾಲ್ ರಾಯ್ ಬುಧವಾರ ತಿಳಿಸಿದ್ದಾರೆ.
ಈ ಸಂಬಂಧ ಎಕ್ಸ್/ಟ್ವಿಟರ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಚಿವ, ಮಾಲಿನ್ಯ ನಿಯಂತ್ರಿಸುವ ಸಲುವಾಗಿ, ಸರ್ಕಾರಿ ನೌಕರರಿಂದ ಮನೆಯಿಂದಲೇ ಕೆಲಸ ಮಾಡಿಸಲು ನಿರ್ಧರಿಸಲಾಗಿದೆ.
ಇದಕ್ಕೂ ಮೊದಲು ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಲಾಗಿತ್ತು.
ದೆಹಲಿಯಲ್ಲಿ ವಾಯುಮಾಲಿನ್ಯ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಗಾಳಿಯ ಗುಣಮಟ್ಟ ತೀವ್ರ ಕುಸಿತ ಕಂಡಿದ್ದರೂ ಕಠಿಣ ಕ್ರಮಗಳನ್ನು ಜಾರಿಗೊಳಿಸುವಲ್ಲಿ ವಿಳಂಬ ಏಕಾಯಿತು ಎಂದು ಸುಪ್ರೀಂ ಕೋರ್ಟ್ ಸೋಮವಾರ ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.
ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (ಎಕ್ಯೂಐ) ಇಂದು ಬೆಳಿಗ್ಗೆ 424ರಷ್ಟಿದೆ. ಮಂಗಳವಾರ ಬೆಳಿಗ್ಗೆ 484 ಅಂಶದಷ್ಟಿತ್ತು. ಇದು ಈ ಋತುವಿನ ಅತ್ಯಂತ ಕೆಟ್ಟ ಮಟ್ಟದ್ದಾಗಿದೆ. ಕೆಲವು ಪ್ರದೇಶಗಳಲ್ಲಿ ಎಕ್ಯೂಐ, 500ರ ಗಡಿಯನ್ನೂ ದಾಟಿದೆ.
ಎಕ್ಯೂಐ ಪ್ರಮಾಣ ಸೊನ್ನೆಯಿಂದ 50 ರಷ್ಟಿದ್ದರೆ 'ಉತ್ತಮ' ಎಂದು, 51ರಿಂದ 100 ರಷ್ಟಿದ್ದರೆ 'ಸಮಾಧಾನಕರ', 101 ರಿಂದ 200 ರಷ್ಟಿದ್ದರೆ 'ಸಾಧಾರಣ', 201 ರಿಂದ 300 ರಷ್ಟಿದ್ದರೆ 'ಕಳಪೆ' ಹಾಗೂ 301 ರಿಂದ 400 ರಷ್ಟಿದ್ದರೆ 'ಅತ್ಯಂತ ಕಳಪೆ' ಎಂದು ಹೇಳಲಾಗುತ್ತದೆ. 401ರಿಂದ 450ರಷ್ಟು ಕಂಡು ಬಂದರೆ 'ತೀವ್ರ ಕಳಪೆ' ಹಾಗೂ 450ಕ್ಕಿಂತ ಹೆಚ್ಚಾದರೆ 'ತೀವ್ರಕ್ಕಿಂತಲೂ ಅಪಾಯಕಾರಿ' ಎಂದು ಪರಿಗಣಿಸಲಾಗುತ್ತದೆ.