ಅಹಮದಾಬಾದ್: ಗಾಂಧಿನಗರದ 70 ವರ್ಷದ ವ್ಯಕ್ತಿಯೊಬ್ಬರಿಗೆ ಝೀಕಾ ವೈರಾಣು ಸೋಂಕು ದೃಢಪಟ್ಟಿದ್ದು, ಪೂರ್ಣ ಚೇತರಿಸಿಕೊಂಡ ಬಳಿಕ ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
0
samarasasudhi
ನವೆಂಬರ್ 08, 2024
ಅಹಮದಾಬಾದ್: ಗಾಂಧಿನಗರದ 70 ವರ್ಷದ ವ್ಯಕ್ತಿಯೊಬ್ಬರಿಗೆ ಝೀಕಾ ವೈರಾಣು ಸೋಂಕು ದೃಢಪಟ್ಟಿದ್ದು, ಪೂರ್ಣ ಚೇತರಿಸಿಕೊಂಡ ಬಳಿಕ ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಅಕ್ಟೋಬರ್ 24ರಂದು ಶೀತ, ಜ್ವರ ಮತ್ತು ಕೀಲು ನೋವಿನಿಂದ ಬಳಲುತ್ತಿದ್ದ ಅವರು ಗಾಂಧಿನಗರದ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು.
ಆ ವ್ಯಕ್ತಿಯೂ ಪೂರ್ಣ ಗುಣಮುಖರಾಗಿದ್ದರಿಂದ ವಾರದ ಹಿಂದೆಯಷ್ಟೇ ಅವರನ್ನು ಮನೆಗೆ ಕಳುಹಿಸಲಾಗಿದೆ ಎಂದು ಗುಜರಾತಿನ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
ಅದಾಗ್ಯೂ, ರೋಗಿಯು ಇತ್ತೀಚಿಗೆ ಯಾವುದೇ ವಿದೇಶ ಪ್ರಯಾಣ ಕೈಗೊಂಡಿರಲಿಲ್ಲ. ಅವರು ವಾಸಿಸುವ ಪ್ರದೇಶ ವ್ಯಾಪ್ತಿಯಲ್ಲಿ ಮತ್ತು ಅವರ ಕುಟುಂಬದ ಸದಸ್ಯರಲ್ಲಿ ಯಾರಿಗೂ ಸೋಂಕು ದೃಢಪಟ್ಟಿಲ್ಲ ಎಂದು ಅದು ಹೇಳಿದೆ.