ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮಲ್ಲಾ ಜಿಲ್ಲೆಯಲ್ಲಿ ಸೊಪೋರ್ ಪ್ರದೇಶದಲ್ಲಿ ಶನಿವಾರ ತಡರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
0
samarasasudhi
ನವೆಂಬರ್ 11, 2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮಲ್ಲಾ ಜಿಲ್ಲೆಯಲ್ಲಿ ಸೊಪೋರ್ ಪ್ರದೇಶದಲ್ಲಿ ಶನಿವಾರ ತಡರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ಸಂಜೆ ವೇಳೆಗೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು. ಇಲ್ಲಿಯವರೆಗೂ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು ಕಾರ್ಯಾಚರಣೆ ಮುಂದುವರಿದಿದೆ ಎಂದು ರಕ್ಷಣಾ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.
ಘಟನಾ ಸ್ಥಳದಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.