ಕಾಸರಗೋಡು : ಭಾರತೀಯ ವಕೀಲರ ಪರಿಷತ್ ಕಾಸರಗೋಡು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ದಿನವನ್ನು ಆಚರಿಸಲಾಯಿತು. ಕಾಸರಗೋಡು ವಿದ್ಯಾನಗರ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಭಾರತೀಯ ವಕೀಲರ ಪರಿಷತ್ತಿನ ಕಾಸರಗೋಡು ಜಿಲ್ಲಾಧ್ಯಕ್ಷ ವಕೀಲ ಎಸಿ ಅಶೋಕ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಆಯೋಜಿಸಲಾಗಿದ್ದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಹಿರಿಯ ವಕೀಲ ಡಾ.ಪಿ.ಅನಂತ ಕೃಷ್ಣ ಭಟ್ ಮುಖ್ಯ ಭಾಷಣ ಮಾಡಿದರು. ವಕೀಲರಾದ ಅನಂತ ರಾಮ, ಕರುಣಾಕರನ್ ನಂಬಿಯಾರ್, ಕೆ.ಮಣಿಕಂಠನ್, ಕೆ.ಎಂ.ಬೀನಾ ಮೊದಲಾದವರು ಉಪಸ್ಥಿತರಿದ್ದರು.




