ಮುಂಬೈ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಕೊಲೆ ಬೆದರಿಕೆಯೊಡ್ಡಿ ಸಂದೇಶ ಕಳುಹಿಸಿದ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
0
samarasasudhi
ನವೆಂಬರ್ 04, 2024
ಮುಂಬೈ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಕೊಲೆ ಬೆದರಿಕೆಯೊಡ್ಡಿ ಸಂದೇಶ ಕಳುಹಿಸಿದ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಮುಂದಿನ ಹತ್ತು ದಿನಗಳಲ್ಲಿ ಅಧಿಕಾರದಿಂದ ಇಳಿಯದಿದ್ದರೆ, ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಅನುಭವಿಸಿದ ಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಮುಂಬೈ ಪೊಲೀಸ್ ಸಂಚಾರ ದಳದ ನಿಯಂತ್ರಣ ಕೊಠಡಿಗೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿ ಮಹಿಳೆಯನ್ನು ಬಂಧಿಸಿರುವ ಮುಂಬೈ ಪೊಲೀಸರು, ಬೆದರಿಕೆ ಕುರಿತು ಉತ್ತರ ಪ್ರದೇಶ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತನಿಖೆ ಪ್ರಗತಿಯಲ್ಲಿದೆ. ಯೋಗಿ ಅವರ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
ಅಕ್ಟೋಬರ್ 12ರಂದು ಮುಂಬೈನ ಬಾಂದ್ರಾ ಪ್ರದೇಶದ ನಿರ್ಮಲ್ ನಗರದಲ್ಲಿರುವ ತಮ್ಮ ಪುತ್ರ, ಶಾಸಕ ಜೀಶನ್ ಅವರ ಕಚೇರಿಯಿಂದ ಹೊರಗೆ ಬಂದ ಬಾಬಾ ಸಿದ್ದೀಕಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.
ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ನಡೆದಿರುವ ಈ ಕೃತ್ಯವು ಮಹಾರಾಷ್ಟ್ರ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ.
288 ಸದಸ್ಯ ಬಲದ 'ಮಹಾ' ವಿಧಾನಸಭೆಗೆ ನವೆಂಬರ್ 20ರಂದು ಮತದಾನ ನಡೆಯಲಿದೆ. 23ರಂದು ಫಲಿತಾಂಶ ಪ್ರಕಟವಾಗಲಿದೆ.