ನವದೆಹಲಿ: ಉತ್ತರ ದೆಹಲಿಯ ಬವಾನಾ ಕೈಗಾರಿಕಾ ಪ್ರದೇಶದಲ್ಲಿ ಚಪಾತಿ ನೀಡಲು ನಿರಾಕರಿಸಿದ್ದಕ್ಕೆ ಕಾರ್ಮಿಕರಿಬ್ಬರ ನಡುವೆ ವಾಗ್ವಾದ ಆರಂಭವಾಗಿ, ಅದು ಕಾರ್ಮಿಕರೊಬ್ಬರ ಸಾವಿಗೆ ಕಾರಣವಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದರು.
0
samarasasudhi
ನವೆಂಬರ್ 01, 2024
ನವದೆಹಲಿ: ಉತ್ತರ ದೆಹಲಿಯ ಬವಾನಾ ಕೈಗಾರಿಕಾ ಪ್ರದೇಶದಲ್ಲಿ ಚಪಾತಿ ನೀಡಲು ನಿರಾಕರಿಸಿದ್ದಕ್ಕೆ ಕಾರ್ಮಿಕರಿಬ್ಬರ ನಡುವೆ ವಾಗ್ವಾದ ಆರಂಭವಾಗಿ, ಅದು ಕಾರ್ಮಿಕರೊಬ್ಬರ ಸಾವಿಗೆ ಕಾರಣವಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದರು.
ದೀಪಾವಳಿ ಹಬ್ಬದ ಅಂಗವಾಗಿ 29ರಂದು ಕಟ್ಟಡದ ಚಾವಣಿಯನ್ನು ರಾಮ್ ಪ್ರಕಾಶ್ ಮತ್ತು ದೀಪಕ್ ಅವರು ಅಲಂಕರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಪ್ರತ್ಯಕ್ಷದರ್ಶಿ ಪ್ರಕಾರ, ಪಕ್ಕದ ಕಾರ್ಖಾನೆಯ ಕೆಲಸಗಾರ-ಮದ್ಯವ್ಯಸನಿ ಅಸ್ಲಂ ಅವರು ಪ್ರಕಾಶ್ ಬಳಿ ಎರಡು ಚಪಾತಿ ಕೊಡುವಂತೆ ಕೇಳಿದರು. ಅದಕ್ಕೆ ಪ್ರಕಾಶ್ ನಿರಾಕರಿಸಿರುವುದು ಜಗಳಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆ ಪ್ರಕಾರ ಪ್ರಕಾಶ್, ಅಸ್ಲಂ ಅವರಿಗೆ ದುಡಿದು ತಿನ್ನುವಂತೆ ಹೇಳಿದ್ದಾರೆ. ಇದರಿಂದ ಕೋಪಗೊಂಡ ಅಸ್ಲಂ, ಪ್ರಕಾಶ್ ಅವರನ್ನು ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿ, ಪ್ರಕಾಶ್ ಅವರನ್ನು ಅಸ್ಲಂ ನಾಲ್ಕನೇ ಮಹಡಿಯಿಂದ ಕೆಳಗೆ ತಳ್ಳಿದ್ದಾನೆ.
ಕೆಳಗೆ ಬಿದ್ದ ಪ್ರಕಾಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಅವರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಅಸ್ಲಂ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.