ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನಿಂದ ಮತ್ತೊಮ್ಮೆ ಬೆದರಿಕೆ ಸಂದೇಶ ಬಂದಿದೆ ಎಂದು ಮುಂಬೈ ಪೊಲೀಸರು ತಿಳಿಸಿರುವುದಾಗಿ ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.
0
samarasasudhi
ನವೆಂಬರ್ 08, 2024
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನಿಂದ ಮತ್ತೊಮ್ಮೆ ಬೆದರಿಕೆ ಸಂದೇಶ ಬಂದಿದೆ ಎಂದು ಮುಂಬೈ ಪೊಲೀಸರು ತಿಳಿಸಿರುವುದಾಗಿ ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.
ಗುರುವಾರ ತಡರಾತ್ರಿ ಮುಂಬೈ ಟ್ರಾಫಿಕ್ ಕಂಟ್ರೋಲ್ ರೂಮ್‌ಗೆ ಬೆದರಿಕೆ ಸಂದೇಶ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಸಲ್ಮಾನ್ ಖಾನ್ ಅವರಿಗೆ ಕೊಲೆ ಬೆದರಿಕೆಯೊಡ್ಡಿದ್ದ ಆರೋಪದಡಿ ಬಿಖಾ ರಾಮ್ ಅಲಿಯಾಸ್ ವಿಕ್ರಮ್ (32) ಎಂಬುವವರನ್ನು ಹಾವೇರಿ ಜಿಲ್ಲಾ ಪೊಲೀಸರು ಬಂಧಿಸಿದ್ದು, ಮುಂಬೈನ ಭಯೋತ್ಪಾದನಾ ನಿಗ್ರಹ ಪಡೆಯ ವಶಕ್ಕೆ ಒಪ್ಪಿಸಿದ್ದರು.
ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನಿಂದ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಸತತವಾಗಿ ಜೀವ ಬೆದರಿಕೆ ಸಂದೇಶಗಳು ಬರುತ್ತಿವೆ. ಇದರ ಬೆನ್ನಲೇ ಗುರುವಾರ ನಟ ಶಾರುಕ್ ಖಾನ್ ಅವರಿಗೂ ವ್ಯಕ್ತಿಯೊಬ್ಬರಿಂದ ಜೀವ ಬೆದರಿಕೆ ಕರೆ ಬಂದಿತ್ತು. ₹50 ಲಕ್ಷದ ಬೇಡಿಕೆಯನ್ನೂ ಇಡಲಾಗಿತ್ತು.
ಶಾರುಕ್ ಖಾನ್ ಅವರಿಗೆ ಬೆದರಿಕೆ ಒಡ್ಡಿದ ಕರೆಯು ಬಾಂದ್ರಾ ಪೊಲೀಸ್ ಠಾಣೆಗೆ ಬಂದಿತ್ತು. ಮುಂಬೈ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದರು. ಹೆಚ್ಚಿನ ತನಿಖೆಗಾಗಿ ಛತ್ತೀಸಗಢದ ರಾಯಪುರ ಸೇರಿ ಬೇರೆ ಬೇರೆ ರಾಜ್ಯಗಳ ವಿವಿಧೆಡೆ ಪೊಲೀಸರ ತಂಡ ತೆರಳಿತ್ತು.