HEALTH TIPS

ಕಾಶ್ಮೀರದಲ್ಲಿ ಎನ್‌ಕೌಂಟರ್‌ | ಉಗ್ರನ ಹತ್ಯೆ, ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ. ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರು ಅಡಗಿರುವ ಬಗ್ಗೆ ಗುಪ್ತಚರ ಮಾಹಿತಿ ಮೇರೆಗೆ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಡೆಸಿದ್ದಾರೆ.

ಬಂಡಿಪೋರಾದ ಚೂಂಟ್‌ಪತ್ರಿ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ ಭದ್ರತಾ ಪಡೆಗಳು, ನಂತರ ಉಗ್ರರು ಅಡಗಿದ್ದ ಜಾಗವನ್ನು ಸುತ್ತುವರಿದವು. ಉಗ್ರರು ಗುಂಡಿನ ದಾಳಿ ಆರಂಭಿಸಿದಾಗ, ಅದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಸಹ ದಾಳಿ ನಡೆಸಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದೆ. ಇದೇ ವೇಳೆ ಸಿಆರ್‌ಪಿಎಫ್ ಪಡೆಯ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries