ಒಟ್ಟಾವ: ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ಸಭಾ ದೇವಾಲಯದ ಬಳಿ ಖಾಲಿಸ್ತಾನಿ ಬೆಂಬಲಿಗರ ನಡೆಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಅಧಿಕಾರಿ ಹರಿಂದರ್ ಸೋಹಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
0
samarasasudhi
ನವೆಂಬರ್ 05, 2024
ಒಟ್ಟಾವ: ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ಸಭಾ ದೇವಾಲಯದ ಬಳಿ ಖಾಲಿಸ್ತಾನಿ ಬೆಂಬಲಿಗರ ನಡೆಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಅಧಿಕಾರಿ ಹರಿಂದರ್ ಸೋಹಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಖಾಲಿಸ್ತಾನ ಧ್ವಜಗಳನ್ನು ಹಿಡಿದಿದ್ದ ಪ್ರತಿಭಟನಕಾರರು ಭಾನುವಾರ ಹಿಂದೂ ದೇವಾಲಯದ ಆವರಣದೊಳಗೆ ನುಗ್ಗಿ, ಅಲ್ಲಿನ ಜನರೊಂದಿಗೆ ಘರ್ಷಣೆ ನಡೆಸಿದ್ದರು.
ಖಾಲಿಸ್ತಾನ ಪರ ಬ್ಯಾನರ್‌ಗಳನ್ನು ಹಿಡಿದಿದ್ದ ಪ್ರತಿಭಟನಕಾರರು ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳಲ್ಲಿ ಇದನ್ನು ಕಾಣಬಹುದಾಗಿದೆ ಎಂದು ಪೀಲ್ ಪ್ರದೇಶದ ಪೊಲೀಸರು ತಿಳಿಸಿದ್ದಾರೆ. ದಾಳಿ ಕುರಿತ ವರದಿಯನ್ನು ಕೆನಡಾದ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ ಮಾಡಿದೆ.
ಹಿಂದೂ ಸಭಾ ಮಂದಿರ ದೇಗುಲದ ಆವರಣದಲ್ಲಿ ಜನರು ಕೈ ಕೈ ಮಿಲಾಯಿಸಿ, ಹೊಡೆದಾಡಿಕೊಂಡಿರುವ ದೃಶ್ಯ ವಿಡಿಯೊದಲ್ಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಪ್ರತಿಭಟನೆಯಲ್ಲಿ ಭಾಗಿಯಾದ ಆರೋಪದ ಮೇಲೆ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಘಟನೆಯನ್ನು ಭಾರತದ ಹೈಕಮಿಷನ್ ಮತ್ತು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿವೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ, ವಿಎಚ್‌ಪಿ, ಬಿಜೆಪಿ, ಕಾಂಗ್ರೆಸ್ ನಾಯಕರೂ ಖಂಡಿಸಿದ್ದಾರೆ.