ರಾಂಚಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಅವರ ಪತ್ನಿ ಸಾಕ್ಷಿ ಅವರು ರಾಂಚಿಯಲ್ಲಿ ಮತ ಚಲಾಯಿಸಿದ್ದಾರೆ.
0
samarasasudhi
ನವೆಂಬರ್ 13, 2024
ರಾಂಚಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಅವರ ಪತ್ನಿ ಸಾಕ್ಷಿ ಅವರು ರಾಂಚಿಯಲ್ಲಿ ಮತ ಚಲಾಯಿಸಿದ್ದಾರೆ.
ಅಲ್ಲಲ್ಲಿ ಸಣ್ಣಪುಟ್ಟ ಗಲಾಟೆಗಳನ್ನು ಹೊರತುಪಡಿಸಿದರೆ ಮತದಾನ ಬಹುತೇಕ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಮತದಾನ ಆರಂಭವಾದಾಗ ಕೆಲವು ಮತಗಟ್ಟೆಗಳ ಮತ್ರಯಂತ್ರಗಳಲ್ಲಿ ದೋಷ ಕಾಣಿಸಿಕೊಂಡಿತ್ತು, ತಕ್ಷಣಕ್ಕೆ ಅಧಿಕಾರಿಗಳು ಮತಯಂತ್ರ ಸರಿಪಡಿಸಿ ಮತದಾನಕ್ಕೆ ಅವಕಾಶ ಕಲ್ಪಿಸಿದ್ದಾರೆ. ಬೆಳಿಗ್ಗೆ 11 ಗಂಟೆಯವರೆಗೆ ಶೇಕಡಾ 29.31 ರಷ್ಟು ಮತದಾನವಾಗಿತ್ತು ಎಂದು ಚುನಾವಣೆ ಅಧಿಕಾರಿಗಳು ತಿಳಿಸಿದ್ದಾರೆ.
ಜಾರ್ಖಂಡ್‌ನಲ್ಲಿ ಒಟ್ಟು 81 ವಿಧಾನಸಭಾ ಕ್ಷೇತ್ರಗಳಿವೆ. 38 ಕ್ಷೇತ್ರಗಳಿಗೆ ನವೆಂಬರ್ 20ರಂದು ಮತದಾನ ನಡೆಯಲಿದೆ.
ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.