HEALTH TIPS

Navy Day: ಡಿ.4ರಂದು ನೌಕಾಪಡೆಯಿಂದ ಯುದ್ಧ ಸಾಮರ್ಥ್ಯ ಪ್ರದರ್ಶನ

         ಭುವನೇಶ್ವರ: ಡಿಸೆಂಬರ್ 4ರಂದು ನೌಕಪಡೆ ದಿನ ಅಂಗವಾಗಿ ಒಡಿಶಾದ ಪುರಿಯ ಬ್ಲೂ ಫ್ಲ್ಯಾಗ್ ಬೀಚ್‌ನಲ್ಲಿ ನೌಕಾಬಲದ ಶಕ್ತಿ ಪ್ರದರ್ಶನಗೊಳ್ಳಲಿದೆ.

         ನೌಕಾಪಡೆಯ ಕಾರ್ಯಾಚರಣೆ ಪ್ರಾತ್ಯಕ್ಷಿಕೆಯಲ್ಲಿ ಮಿಗ್-29 ಯುದ್ಧ ವಿಮಾನ, ಎಲ್‌ಸಿಎ ಸೇರಿದಂತೆ 40 ವಿಮಾನಗಳು ಮತ್ತು 25 ಯುದ್ಧನೌಕೆಗಳು ಶಕ್ತಿ ಪ್ರದರ್ಶನ ನಡೆಸಲಿವೆ.

         ಇದೇ ಮೊದಲ ಬಾರಿ ಒಡಿಶಾದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಆಕರ್ಷಕ ಪರೇಡ್‌ಗಳು ಒಳಗೊಂಡಿರಲಿವೆ.


        ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ರಕ್ಷಣಾ ಸಚಿವ ರಾಜನಾಥ ಸಿಂಗ್, ರಾಜ್ಯಪಾಲ ರಘುಬರ್ ದಾಸ್, ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಮತ್ತು ನೌಕಾಪಡೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

            ಕಾರ್ಯಾಚರಣೆಯನ್ನು ವೀಕ್ಷಿಸಲು ಸಾರ್ವಜನಿಕರಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಅತ್ಯಾಧುನಿಕ ಯುದ್ಧನೌಕೆಗಳು ಮತ್ತು ಯುದ್ಧ ವಿಮಾನಗಳನ್ನು ವೀಕ್ಷಿಸುವ ಅವಕಾಶವಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries