ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ 66ರ ಷಟ್ಪಥ ಕಾಮಗಾರಿಯನ್ನು 2025ರ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಲೋಕೋಪಯೋಗಿ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಪಿ.ಎ.ಮುಹಮ್ಮದ್ ರಿಯಾಸ್ ತಿಳಿಸಿದ್ದಾರೆ.
ಅವರು ಮಡಿಕೈ ಪಂಚಾಯಿತಿ ಪುಲಿಕಲ್ ಸೇತುವೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿ ಅವರು ಮಾತನಾಡಿದರು. ಈ ಹಿಂದೆ ಬಳಕೆಯಲ್ಲಿಲ್ಲದ ಮೂಲಕ ಅಪಾಯದಲ್ಲಿದ್ದ ವಿಸಿಬಿ ಒಳಗೊಂಡ ಕಿರುಸೇತುವೆ ಕೆಡವಿ 7.27 ಕೋಟಿ ರೂ.ವೆಚ್ಚದಲ್ಲಿ ನೂತನ ಸೇತುವೆ ನಿರ್ಮಿಸಲಾಗಿದೆ. ಸೇತುವೆ ನಿರ್ಮಾಣಕ್ಕೆ ಉದಾರವಾಗಿ ಭೂಮಿ ನೀಡಿದ ಭೂಮಾಲೀಕರ ಕೊಡುಗೆಯನ್ನು ಸಚಿವರು ಶ್ಲಾಘಿಸಿದರು. ಮಲೆನಾಡು ಹೆದ್ದಾರಿ ಪೂರ್ಣಗೊಳ್ಳುವುದರೊಂದಿಗೆ ಒಂಬತ್ತು ಜಿಲ್ಲೆಗಳ ಮೂಲಕ ಹಾದುಹೋಗುವ ಕರಾವಳಿಯ ಹೆದ್ದಾರಿಯೂ ಪ್ರವಾಸೋದ್ಯಮ ಕ್ಷೇತ್ರಕ್ಕೆ ಮಹತ್ವದ ಕೊಡುಗೆಯಾಗಲಿದೆ ಎಂದು ತಿಳಿಸಿದರು.
ಶಾಸಕ ಇ.ಚಂದ್ರಶೇಖರನ್ ಅಧ್ಯಕ್ಷತೆ ವಹಿಸಿದ್ದರು. ಕೆಆರ್‍ಎಫ್‍ಬಿ ಕಾರ್ಯಪಾಲಕ ಅಭಿಯಂತರ ಕೆ.ಪಿ.ವಿನೋದ್ ಕುಮಾರ್ ವರದಿ ಮಂಡಿಸಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್, ಕಾಞಂಗಾಡು ಬ್ಲಾಕ್ ಪಂಚಾಯಿತಿ ಉಪಾಧ್ಯಕ್ಷೆ ಕೆ.ವಿ.ಶ್ರೀಲತಾ, ಕಾಞಂಗಾಡ್ ಬ್ಲಾಕ್.ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ರಹಮಾನ್, ವಾರ್ಡ್ ಸದಸ್ಯೆ ಎಂ.ರಜಿತಾ, ಮಾನ್ ಮಡಿಕೈ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಪ್ರಭಾಕರನ್, ರಾಜಕೀಯ ಪಕ್ಷದ ಪ್ರತಿನಿಧಿಗಳಾದ ಎಂ.ರಾಜನ್, ಬಂಗಳಂ ಕುಞÂಕೃಷ್ಣನ್, ಪಿ.ರಾಜು, ನಾರಾಯಣನ್ ಮಂಡೋಟ್ ಮತ್ತು ಎ ವೇಲಾಯುಧನ್ ಉಪಸ್ಥಿತರಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಸ್.ಪ್ರೀತಾ ಸ್ವಾಗತಿಸಿದರು. ಉಪಾಧ್ಯಕ್ಷ ವಿ.ಪ್ರಕಾಶ್ ವಂದಿಸಿದರು.




.jpeg)

