HEALTH TIPS

ಗಾಜಾ ಪಟ್ಟಿ | ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 21 ಸಾವು

ಖಾನ್‌ ಯೂನಿಸ್‌ : ಗಾಜಾ ಪಟ್ಟಿಯ ಖಾನ್ ಯೂನಿಸ್‌ ನಗರದಲ್ಲಿನ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 21 ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದಾರೆ ಎಂದು ನಾಸರ್‌ ಆಸ್ಪತ್ರೆಯ ನಿರ್ದೇಶಕ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿದ್ದ ಹಮಾಸ್‌ ಉಗ್ರರರನ್ನು ಕೊಂದಿರುವುದಾಗಿ ಹೇಳಿರುವ ಇಸ್ರೇಲ್‌ ಪಡೆಯೂ, ನಾಗರಿಕರಿಗೆ ಹಾನಿಯನ್ನು ಕಡಿಮೆ ಮಾಡಲು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವುದಾಗಿ ತಿಳಿಸಿದೆ.

ಇಸ್ರೇಲ್‌ ದಾಳಿಯಿಂದ ಗಾಜಾದ ಅನೇಕ ನಿರಾಶ್ರಿತರ ಕೇಂದ್ರಗಳಲ್ಲಿ ಬುಧವಾರ ಅನೇಕ ಸಾವು-ನೋವುಗಳಾಗಿವೆ. ಕೇಂದ್ರ ಗಾಜಾದಲ್ಲಿ ಕನಿಷ್ಠ 10 ಜನರು ಮೃತಪಟ್ಟಿರುವುದು ವರದಿಯಾಗಿದೆ. ಅಲ್ಲದೇ, ಮುವಾಸಿಯಲ್ಲಿನ ನಿರಾಶ್ರಿತರ ಶಿಬಿರಗಳಲ್ಲಿನ ಸುಮಾರು 28 ಜನರು ಗಾಯಗೊಂಡಿದ್ದಾರೆ ಎಂದು ಖಾನ್‌ ಯೂನಿಸ್‌ನ ನಾಸೀರ್‌ ಆಸ್ಪತ್ರೆಯ ನಿರ್ದೇಶಕ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries