ಕುಂಬಳೆ: ಯಕ್ಷಗಾನದ ಹಿರಿಯ ಕಲಾವಿದ, ಶ್ರೀ ಧರ್ಮಸ್ಥಳ ಮೇಳವೊಂದರಲ್ಲೇ ಐದು ದಶಕಕ್ಕೂ ಹೆಚ್ಚುಕಾಲ ತಿರುಗಾಟ ನಡೆಸಿದ ಕುಂಬಳೆ ಶ್ರೀಧರ ರಾವ್ ಸ್ಮøತಿ ಕಾರ್ಯಕ್ರಮ 29ರಂದು ಕುಂಬಳೆಯಲ್ಲಿ ಜರುಗಲಿದೆ. ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಭಾಮಂಟಪದಲ್ಲಿ ಬೆಳಗ್ಗೆ 9 ರಿಂದ ರಾತ್ರಿ 9 ರ ವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಸಂಜೆ 4ಕ್ಕೆ ಶ್ರೀಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹಾಗೂ ಶ್ರೀಧಾಮ-ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಉಪಸ್ಥಿತಿಯಲ್ಲಿ 'ಶ್ರೀಧರ ಸ್ಮøತಿ' ಕಾರ್ಯಕ್ರಮ ಜರುಗಲಿದೆ.
ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ ಭಟ್ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಧರ್ಮಸ್ಥಳ ಎಸ್.ಡಿ.ಎಂ. ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಭಾಗವಹಿಸುವರು. ವಿದ್ವಾಂಸ, ಅರ್ಥದಾರಿ ಡಾ.ಎಂ.ಪ್ರಭಾಕರ ಜೋಶಿ 'ಶ್ರೀಧರ ಸ್ಮøತಿ' ಮಾಡಲಿದ್ದಾರೆ. ಪತ್ರಕರ್ತ, ಕಲಾವಿದ ನಾ. ಕಾರಂತ ಪೆರಾಜೆ ಸಂಪಾದಕತ್ವದ 'ಕಲಾ ಶ್ರೀಧರ'' ಸ್ಮøತಿ-ಕೃತಿಯನ್ನು ಯತಿದ್ವಯರು ಅನಾವರಣಗೊಳಿಸುವರು. .
ಪೂರ್ವಾಹ್ನ 9ಕ್ಕೆ ಶ್ರೀ ಕಣಿಪುರ ಕ್ಷೇತ್ರದ ಪ್ರಧಾನ ಅರ್ಚಕ ವೇ.ಮೂ. ಮಾಧವ ಅಡಿಗ, ಸಾಮಾಜಿಕ ಸೇವಾ ಕಾರ್ಯಕರ್ತ ಹಾಗೂ ಕಲಾಪೋಷಕ ಮಂಜುನಾಥ ಆಳ್ವ ಮಡ್ವ, ಧರ್ಮಸ್ಥಳ ಮೇಳದ ಭಾಗವತ ರಾಮಕೃಷ್ಣ ಮಯ್ಯ ಸಿರಿಬಾಗಿಲು, ಕಲಾರತ್ನ ಶಂ.ನಾ. ಅಡಿಗ ಇವರ ಉಪಸ್ಥಿತಿಯಲ್ಲಿ 'ಶ್ರೀಧರ ಸ್ಮೃತಿ' ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ.
9.30ರಿಂದ ಕುಂಬಳೆ ಶ್ರೀಧರ ರಾವ್ ಅವರ ಪ್ರಧಾನ ಪಾತ್ರಗಳ ನೆನವರಿಕೆಯ 'ಸಂವಾದದ ತಾಳಮದ್ದಳೆ' ಹಾಗೂ 'ಕೃಷ್ಣ ಸಂಧಾನ'' ಆಖ್ಯಾನದ ತಾಳಮದ್ದಳೆ ಜರಗಲಿದೆ. ದಿನೇಶ ಅಮ್ಮಣ್ಣಾಯ, ಪುತ್ತಿಗೆ ರಘುರಾಮ ಹೊಳ್ಳ, ಸಿರಿಬಾಗಿಲು ರಾಮಕೃಷ್ಣ ಮಯ್ಯ (ಭಾಗವತರು), ಲಕ್ಷ್ಮೀಶ ಅಮ್ಮಣ್ಣಾಯ, ಪಿ.ಜಿ.ಜಗನ್ನಿವಾಸ ರಾವ್, ರಾಮಮೂರ್ತಿ ಕುದ್ರೆಕೂಡ್ಲು, ಲವಕುಮಾರ್ ಐಲ (ಮದ್ದಳೆ - ಚೆಂಡೆ); ಡಾ.ಎಂ.ಪ್ರಭಾಕರ ಜೋಶಿ, ಉಜಿರೆ ಆಶೋಕ ಭಟ್, ಸುಣ್ಣಂಬಳ ವಿಶ್ವೇಶ್ವರ ಭಟ್, ಶಂಭು ಶರ್ಮ, ಎಂ.ಕೆ.ರಮೇಶ ಆಚಾರ್ಯ, ವಸಂತ ಗೌಡ ಕಾಯರ್ತಡ್ಕ, ಗೋಪಾಲ ನಾಯಕ್ ಸೂರಂಬೈಲು, ದಿವಾಕರ ಆಚಾರ್ಯ ಗೇರುಕಟ್ಟೆ, ಅಶೋಕ್ ಕುಂಬ್ಳೆ (ಅರ್ಥದಾರಿಗಳು) ಭಾಗವಹಿಸಲಿದ್ದಾರೆ. ಬಳಿಕ ಶ್ರೀ ವಿಘ್ನೇಶ್ವರ ಯಕ್ಷಗಾನ ಕಲಾ ಸಂಘ, ನಾರಾಯಣ ಮಂಗಲ, ಕುಂಬಳೆ; ಶ್ರೀ ಪಾರ್ತಿಸುಬ್ಬ ಯಕ್ಷಗಾನ ಕಲಾ ಸಂಘ, ಶೇಡಿಕಾವು-ಕುಂಬಳೆ, ಕುಂಬಳೆ ಶ್ರೀಧರ ರಾವ್ ಅಭಿಮಾನಿಗಳು ಆಯೋಜನೆಯಲ್ಲಿ ಶ್ರೀ ಮಹಾಲಕ್ಷ್ಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ, ಶ್ರೀಧಾಮ, ಮಾಣಿಲ ಇವರಿಂದ ಡಾ.ಸತೀಶ ಪುಣಿಂಚತ್ತಾಯ, ಪೆರ್ಲ ಇವರ ಸಂಯೋಜನೆಯಲ್ಲಿ 'ಕಂಸವಧೆ' ಬಯಲಾಟ ಜರುಗಲಿದೆ.





